ಮಂಗಳೂರು : ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಅಕ್ಟೋಬರ್ 1ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಉದ್ಘಾಟಿಸಲಿದ್ದು, ಭಾರತೀಯ ರೆಡ್ ಕ್ರಾಸ್‌ನ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಸಿ. ಎ. ಶಾಂತಾರಾಮ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯವಂತ ನಾಯಕ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ತಿನ ಉಪ ನಿರ್ದೇಶಕರಾದ ಪ್ರೊ. ರಾಮಕೃಷ್ಣ ಬಿ. ಎಂ. ಸೇರಿದಂತೆ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.