image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನ್ಯಾಯಾಂಗ ವ್ಯವಸ್ಥೆಗೆ ಅಪಮಾನ: ವಕೀಲ ಪ್ರಸಾದ್ ವಿರುದ್ಧ ಬಂಟ್ವಾಳದಲ್ಲಿ ದೂರು ದಾಖಲು

ನ್ಯಾಯಾಂಗ ವ್ಯವಸ್ಥೆಗೆ ಅಪಮಾನ: ವಕೀಲ ಪ್ರಸಾದ್ ವಿರುದ್ಧ ಬಂಟ್ವಾಳದಲ್ಲಿ ದೂರು ದಾಖಲು

ಬಂಟ್ವಾಳ: ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪದ ಮೇಲೆ ವಕೀಲ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ @ ಮಹಮ್ಮದ್ ಹನೀಫ್ (43) ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 28, 2026 ರಂದು ಬಿ. ಸಿ. ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು. ಈ ವೇಳೆ ನ್ಯಾಯಾಲಯದ ಪ್ರಕ್ರಿಯೆಗಳು ಹಾಗೂ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸತ್ಯಕ್ಕೆ ದೂರವಾದ ಹೇಳಿಕೆಗಳನ್ನು ನೀಡುವ ಮೂಲಕ ನ್ಯಾಯಾಂಗದ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರು ಆಧರಿಸಿ ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ