image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ

ಮಂಗಳೂರು: ಮಂಗಳೂರಿನ ಎಂಆರ್‌‌ಪಿಎಲ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಕ್ಷಣವೇ ಆರೋಗ್ಯ ಸುರಕ್ಷಾ ಸೌಲಭ್ಯ ಜಾರಿಗೊಳಿಸುವಂತೆ ಮತ್ತು ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಸುರತ್ಕಲ್ ಮಾತ್ರವಲ್ಲದೆ ಇಡೀ ನಗರದ ಜನತೆಯನ್ನು ಬೆಚ್ಚಿ ಬೀಳಿಸಿರುವ ಈ ಭೂಕಂಪನದಂತಹ ಸ್ಫೋಟದ ನಿಖರ ಕಾರಣವನ್ನು ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸಬೇಕು. ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಕರ್ತವ್ಯ ನಿರತರಾಗಿದ್ದ ನೌಕರ ಮೃತಪಟ್ಟಿರುವುದು ಆಘಾತಕಾರಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಮೃತಪಟ್ಟ ಕಾರ್ಮಿಕರ ಕುಟುಂಬವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಚ್ಚಿನ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕಂಪನಿಯೇ ಭರಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ನೌಕರರಿಗೆ ಕೂಡಲೇ ಆರೋಗ್ಯ ಸುರಕ್ಷಾ ಸೌಲಭ್ಯ ಜಾರಿ ಮಾಡುವುದರ ಜೊತೆಗೆ ಸೂಕ್ತ ರಕ್ಷಣಾ ಸೌಲಭ್ಯ ಮತ್ತು ಮೂಲಸೌಕರ್ಯಗಳನ್ನು ಖಾತ್ರಿಪಡಿಸಬೇಕು ಎಂದು ಶಾಸಕರು ಒತ್ತಾಯಿಸಿದರು. ಅಲ್ಲದೆ, ಸ್ಫೋಟದಿಂದ ಸುತ್ತಮುತ್ತಲಿನ ಮನೆ ಹಾಗೂ ಕಟ್ಟಡಗಳಿಗೆ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಅವರು ಸೂಚಿಸಿದರು. ಬಳಿಕ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಮೃತ ನೌಕರರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

Category
ಕರಾವಳಿ ತರಂಗಿಣಿ