image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಿಸಿ ಮನ್ನಾ ಜಮೀನು ಮಂಜೂರಾತಿಗೆ ಅತೀ ಶೀಘ್ರವಾಗಿ ಕಾನೂನು ಕ್ರಮ: ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ

ಡಿಸಿ ಮನ್ನಾ ಜಮೀನು ಮಂಜೂರಾತಿಗೆ ಅತೀ ಶೀಘ್ರವಾಗಿ ಕಾನೂನು ಕ್ರಮ: ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭೂಮಿಹಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೂರು ದಶಕಗಳ ಬೇಡಿಕೆಯಾಗಿರುವ 'ಡಿಸಿ ಮನ್ನಾ' ಜಮೀನು ಮಂಜೂರಾತಿಗೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ನಿವಾರಿಸಿ, ಅತೀ ಶೀಘ್ರದಲ್ಲೇ ವಿಶೇಷ ಕಾನೂನು ರೂಪಿಸಲಾಗುವುದು ಎಂದು ಕಂದಾಯ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರು ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಸುದೀರ್ಘ ಒಂದೂವರೆ ಗಂಟೆಗಳ ಕಾಲ ಸಭೆ ನಡೆಸಿ ಅವರು ಮಾತನಾಡಿದರು. ಸಂಘಟನೆಯ ಪದಾಧಿಕಾರಿಗಳು ಸಲ್ಲಿಸಿದ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಮುಂದಿನ ಸಚಿವ ಸಂಪುಟ ಸಭೆಗೆ ಮುಂಚಿತವಾಗಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಂತೆ ಕಂದಾಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾಂಗ್ರೆಸ್ ಪಕ್ಷವು 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಮಂಜೂರು ಮಾಡುವುದಾಗಿ ಘೋಷಿಸಿದ್ದನ್ನು ಸ್ಮರಿಸಿದ ಸಚಿವರು, ಸಂಪುಟ ಸಭೆಯಲ್ಲಿ ಸೂಕ್ತ ಕಾನೂನು ರೂಪಿಸಿ, ಮುಂದಿನ ದಿನಗಳಲ್ಲಿ ಮಂಗಳೂರಿಗೆ ಸ್ವತಃ ತಾವೇ ಭೇಟಿ ನೀಡಿ ಭೂರಹಿತ ಪರಿಶಿಷ್ಟ ಸಮುದಾಯದ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವುದಾಗಿ ತಿಳಿಸಿದರು.

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿ ಮನ್ನಾ ಜಮೀನು ಮಂಜೂರಾತಿ ಆದೇಶವಾಗದ ಹಿನ್ನೆಲೆಯಲ್ಲಿ, ದ.ಕ. ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿತ್ತು. ಮುಖ್ಯಮಂತ್ರಿಗಳ ಸೂಚನೆಯಂತೆ ಇಂದು ಈ ಮಹತ್ವದ ಸಭೆ ಆಯೋಜಿಸಲಾಗಿತ್ತು.

ಸಭೆಯಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪ್ರಮುಖರಾದ ಬಿ.ಕೆ. ವಸಂತ್ ಬೆಳ್ತಂಗಡಿ, ಪ್ರೇಮನಾಥ್ ಬಲ್ಲಾಳ್‌ಬಾಗ್, ರಘು ಎಕ್ಕಾರ್, ಅಶೋಕ್ ಕೊಂಚಾಡಿ, ಕೃಷ್ಣಾನಂದ ಡಿ. ಮಂಗಳೂರು, ಜಗದೀಶ್ ಪಾಂಡೇಶ್ವರ್, ವೆಂಕಣ್ಣ ಕೊಯ್ಯೂರು, ಆನಂದ ಬೆಳ್ಳಾರೆ, ಹರಿಯಪ್ಪ ಮುತ್ತೂರು, ಶ್ರೀಧರ ಎಸ್. ಕಳೆಂಜ, ರಮೇಶ್ ಆರ್. ಬೆಳ್ತಂಗಡಿ, ನಾರಾಯಣ ಪುದುವೆಟ್ಟು, ಪ್ರಭಾಕರ್ ಶಾಂತಿಕೋಡಿ, ಸದಾಶಿವ ಪಡುಬಿದ್ರೆ, ಸರೋಜಿನಿ ಬಂಟ್ವಾಳ, ಯಶೋಧ ಡಿ. ಮಂಗಳೂರು, ರೋಹಿತ್ ಧರ್ಮಸ್ಥಳ, ಪ್ರದೀಪ್ ಕುಮಾರ್ ಪುದುವೆಟ್ಟು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ