image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿಟ್ಲದಲ್ಲಿ 3 ಟಿಪಿಡಿ ಎಂಆರ್‌ಎಫ್ ಘಟಕ ಉದ್ಘಾಟಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ವಿಟ್ಲದಲ್ಲಿ 3 ಟಿಪಿಡಿ ಎಂಆರ್‌ಎಫ್ ಘಟಕ ಉದ್ಘಾಟಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ವಿವಿಧ ಕೇಂದ್ರ ಯೋಜನೆಗಳಡಿ ಸುಮಾರು ₹60.10 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ 3 ಟಿಪಿಡಿ ಸಾಮರ್ಥ್ಯದ ನೂತನ ಮೆಟೀರಿಯಲ್ ರಿಕವರಿ ಫೆಸಿಲಿಟಿ (ಎಂಆರ್‌ಎಫ್) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯು ಪರಿಸರ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಒಣ ಕಸವನ್ನು ಅತ್ಯಾಧುನಿಕ ವ್ಯವಸ್ಥೆಯಡಿ ಸಂಗ್ರಹಿಸಿ ವಿಲೇವಾರಿ ಮಾಡುವುದರಿಂದ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗಲಿದ್ದು, ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೂ ಅನುಕೂಲವಾಗಲಿದೆ. ಗ್ರಾಮ ಮತ್ತು ಪಟ್ಟಣ ಮಟ್ಟದಲ್ಲಿ ಮೂಲಸೌಕರ್ಯಗಳು ಅಭಿವೃದ್ಧಿಗೊಂಡಾಗ ಮಾತ್ರ 'ವಿಕಸಿತ ಭಾರತ'ದ ಕನಸು ನನಸಾಗಲು ಸಾಧ್ಯ ಎಂದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯ ಅಂಗವಾಗಿ ಹಮ್ಮಿಕೊಳ್ಳಲಾದ 'ಸೇವಾ ಸಂಕಲ್ಪ ಅಭಿಯಾನ'ದ ಭಾಗವಾಗಿ ಪಳಿಕೆಯಲ್ಲಿ ಸಂಸದರು ಕಾರ್ಯಕರ್ತರೊಂದಿಗೆ ಸಸಿ ನೆಟ್ಟು ನೀರುಣಿಸಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ