image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆ ಅತಿಕ್ರಮಣ: ಸ್ಥಳಕ್ಕೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ, ಪರಿಶೀಲನೆ

ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆ ಅತಿಕ್ರಮಣ: ಸ್ಥಳಕ್ಕೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ, ಪರಿಶೀಲನೆ

ಮಂಗಳೂರು: ನಗರದ ಕೊಟ್ಟಾರದ ಸಾಗರ್ ಕೋರ್ಟ್ ರಸ್ತೆಯಲ್ಲಿ ನಡೆದಿರುವ ರಸ್ತೆ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಗಂಭೀರತೆಯನ್ನು ಪರಿಗಣಿಸಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆ ಅಗಲೀಕರಣ ಹಾಗೂ ಅತಿಕ್ರಮಣದ ಕುರಿತಾಗಿ ಸ್ಥಳೀಯ ನಿವಾಸಿಗಳು ತಮ್ಮ ಅಹವಾಲುಗಳನ್ನು ಮುಡಾ ಅಧ್ಯಕ್ಷರ ಬಳಿ ತೋಡಿಕೊಂಡರು. ಸಾರ್ವಜನಿಕರ ದೂರಿನ ಮೇರೆಗೆ ಸ್ಥಳದಲ್ಲೇ ಪರಿಶೀಲನೆ ನಡೆಸಿದ ಅವರು, ಈ ಸಂಬಂಧ ಅಧಿಕಾರಿಗಳಿಂದ ಅಗತ್ಯ ದಾಖಲೆಗಳು ಹಾಗೂ ವಿಸ್ತೃತ ಮಾಹಿತಿಯನ್ನು ಪಡೆದುಕೊಂಡರು.

ಪರಿಶೀಲನೆ ವೇಳೆ ಮೇಲ್ನೋಟಕ್ಕೆ ರಸ್ತೆ ಅತಿಕ್ರಮಣವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಕೂಡಲೇ ಎಚ್ಚೆತ್ತುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಏಕ ನಿವೇಶನ ವಿನ್ಯಾಸವನ್ನು (Single Plot Layout) ತಕ್ಷಣವೇ ರದ್ದುಪಡಿಸಿ, ನಿಯಮಾನುಸಾರ ಪರಿಷ್ಕೃತ ವಿನ್ಯಾಸದ ಅನುಮೋದನೆಯನ್ನು ಪಡೆದುಕೊಳ್ಳುವಂತೆ ಅವರು ಸ್ಥಳದಲ್ಲೇ ಕಾವ್ಯರೂಪದ ಖಡಕ್ ಸೂಚನೆಗಳನ್ನು ಹೊರಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಮುಡಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ