image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಅಭಿನಂದನೆ; ಕ್ರೀಡಾ ಕೋಟಾದಡಿ ಉನ್ನತ ಹುದ್ದೆಗೆ ಶಾಸಕ ವೇದವ್ಯಾಸ್ ಕಾಮತ್ ಆಗ್ರಹ

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಅಭಿನಂದನೆ; ಕ್ರೀಡಾ ಕೋಟಾದಡಿ ಉನ್ನತ ಹುದ್ದೆಗೆ ಶಾಸಕ ವೇದವ್ಯಾಸ್ ಕಾಮತ್ ಆಗ್ರಹ

ಮಂಗಳೂರು: ಜಪಾನ್‌ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4x400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ತುಳುನಾಡಿನ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿದ ಕರಾವಳಿಯ ಹೆಮ್ಮೆಯ ಮಗಳಾದ ಎಂ.ಆರ್. ಪೂವಮ್ಮ ಅವರ ನಿವಾಸಕ್ಕೆ ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಭೇಟಿ ನೀಡಿ ಅದ್ಧೂರಿಯಾಗಿ ಅಭಿನಂದಿಸಲಾಯಿತು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, "ದೇಶದ ಇತರ ರಾಜ್ಯಗಳಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಯಾವ ರೀತಿಯ ಗೌರವ ಧನ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆಯೋ, ಅದೇ ರೀತಿಯಲ್ಲಿ ನಮ್ಮ ರಾಜ್ಯ ಸರ್ಕಾರವೂ ಕೂಡ ಕುಡ್ಲದ ಚಿನ್ನದ ಹುಡುಗಿಯನ್ನು ಗೌರವಿಸಬೇಕು. ಅಲ್ಲದೆ, ಕ್ರೀಡಾ ಕೋಟಾದಡಿಯಲ್ಲಿ ಅವರಿಗೆ ಉನ್ನತ ಹುದ್ದೆಯನ್ನು ಕಲ್ಪಿಸಿಕೊಡಬೇಕು" ಎಂದು ಒತ್ತಾಯಿಸಿದರು. ಮುಂದುವರಿದು, ಎಂ.ಆರ್. ಪೂವಮ್ಮವರಿಂದ ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಸಾಧನೆಗಳು ಮೂಡಿಬರಲಿ ಹಾಗೂ ಅವರು ನಾಡಿನ ಯುವ ಜನತೆಗೆ ಎಂದೆಂದಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.

ಈ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪ್ರಮುಖರಾದ ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಪೂರ್ಣಿಮಾ ಎಂ., ನಿತಿನ್ ಕುಮಾರ್, ನಂದನ್ ಮಲ್ಯ, ರಾಜ್ ಗೋಪಾಲ್ ರೈ, ಪೂರ್ಣಿಮಾ ರಾವ್, ಉಮೇಶ್ ಶೆಟ್ಟಿ, ರವಿಚಂದ್ರ, ಪ್ರವೀಣ್ ನಿಡ್ಡೆಲ್, ಅರುಣ್ ಉರ್ವ, ದೀಪಕ್ ಡಿಸೋಜ ಸೇರಿದಂತೆ ಮಂಡಲದ ವಿವಿಧ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ