ಮಂಗಳೂರು: ನಗರದಲ್ಲಿ ಮಳೆಯು ಮುಂದುವರಿದಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸಾರ್ವಜನಿಕ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ರಾಜಾಜಿ ಪಾರ್ಕ್ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು
ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ದಿನ ಹಾಗೂ ನಾಳೆ ದಿನಾಂಕ 4/10/2026 ಸಂಜೆ 06:00 ಗಂಟೆಗೆ ನಡೆಯಬೇಕಿದ್ದ ಕಾರ್ಯಕ್ರಮವು ಮುಂದಿನ ದಿನಾಂಕಕ್ಕೆ ಮರುನಿಗದಿಯಾಗಲಿದ್ದು, ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ ಆಡಳಿತಯಂತ್ರದೊಂದಿಗೆ ಸಹಕರಿಸುವಂತೆ ಕೋರಲಾಗಿದೆ. ಕಾರ್ಯಕ್ರಮದ ಮುಂದಿನ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.