image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪೂವಮ್ಮ ಅವರಿಗೆ ಸತೀಶ್ ಕುಂಪಲರಿಂದ ಅಭಿನಂದನೆ

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪೂವಮ್ಮ ಅವರಿಗೆ ಸತೀಶ್ ಕುಂಪಲರಿಂದ ಅಭಿನಂದನೆ

ಮಂಗಳೂರು: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಕ್ರೀಡಾ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗುತ್ತಿದ್ದು, ವಿಶ್ವಮಟ್ಟದಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ತೋರುತ್ತಿರುವುದು ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಪ್ರಸ್ತುತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಸತತವಾಗಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುತ್ತಿದ್ದು, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕ್ರೀಡಾಪಟುವಾಗಿ, ಜಿಲ್ಲೆಯಲ್ಲಿ ನೆಲೆಸಿರುವ ಎಂ.ಆರ್. ಪೂವಮ್ಮ ಅವರು ಚಿನ್ನದ ಪದಕ ಗೆದ್ದು ದೇಶ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವುದು ಪ್ರತಿಯೊಬ್ಬರಿಗೂ ಹೆಮ್ಮೆಯ ವಿಷಯವಾಗಿದೆ.

ಈ ವಿಶೇಷ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿಯ ವತಿಯಿಂದ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪೂವಮ್ಮ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾ ಉಪಸ್ಥಿತರಿದ್ದು, ಕ್ರೀಡಾಪಟುವಿಗೆ ಶುಭ ಹಾರೈಸಿದರು.
ಈ ಅಭಿನಂದನಾ ಸಮಾರಂಭದಲ್ಲಿ ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗಡೆ, ಕಾರ್ಯದರ್ಶಿ ಅಮಿತ್ ರಾಜ್, ಜಿಲ್ಲಾ ಮಾಧ್ಯಮ ಪ್ರಮುಖ್ ವಸಂತ್ ಜೆ. ಪೂಜಾರಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಮುಖ್ ಅಕ್ಷಯ್ ಆಳ್ವ ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ರಾಹುಲ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ