image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಜಾಲ್ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ: ರೂ. 40 ಲಕ್ಷ ಅನುದಾನ ಮಂಜೂರು

ಬಜಾಲ್ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ: ರೂ. 40 ಲಕ್ಷ ಅನುದಾನ ಮಂಜೂರು

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಸೋನಾಲಿಕೆ ಅಡ್ಡರಸ್ತೆಯಲ್ಲಿ ಕೆ. ಪ್ರಭಾಕರ್ ಅವರ ಮನೆ ಬಳಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಯು ಒಟ್ಟು 40 ಲಕ್ಷ ರೂಪಾಯಿಗಳ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ನೂತನ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ವಿಧ್ಯುಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಈ ಭಾಗದ ಪ್ರಮುಖರಾದ ಚಂದ್ರಶೇಖರ್ ಬಜಾಲ್ ಹಾಗೂ ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಯಂತೆ ಈ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಎಲ್ಲರ ಒಮ್ಮತ ಹಾಗೂ ಸಹಕಾರದೊಂದಿಗೆ ಈ ಕಾಮಗಾರಿಯು ಅತ್ಯಂತ ಗುಣಮಟ್ಟದಿಂದ ನಿಗದಿತ ಅವಧಿಯೊಳಗೆ ಪೂರ್ಣಗೊಂಡು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಕಿರಣ್ ರೈ, ಸುಕೇಶ್ ಅಳಪೆ, ಶಿವಾಜಿ, ಪ್ರೀತೇಶ್ ಸೇರಿದಂತೆ ಭಾರತೀಯ ಜನತಾ ಪಕ್ಷದ ಪ್ರಮುಖ ಮುಖಂಡರು, ವಾರ್ಡಿನ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ