image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಡಿತರ ಚೀಟಿ ಸಮಸ್ಯೆಗೆ ಡೋರ್‌ಸ್ಟೆಪ್ ಡೆಲಿವರಿ ಪರಿಹಾರ: ಆಪ್ ಆಗ್ರಹ

ಪಡಿತರ ಚೀಟಿ ಸಮಸ್ಯೆಗೆ ಡೋರ್‌ಸ್ಟೆಪ್ ಡೆಲಿವರಿ ಪರಿಹಾರ: ಆಪ್ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳು, ಸರ್ವರ್ ಸಮಸ್ಯೆ ಹಾಗೂ ಕಡ್ಡಾಯ ಇ-ಕೆವೈಸಿ ವಿಳಂಬದಿಂದ ಬಡ ಜನರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವಂತಾಗಿದೆ. ಈ ಆಡಳಿತಾತ್ಮಕ ವೈಫಲ್ಯವನ್ನು ತಡೆದು, ಪಡಿತರ ಧಾನ್ಯಗಳನ್ನು ನೇರವಾಗಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ (ಡೋರ್‌ಸ್ಟೆಪ್ ಡೆಲಿವರಿ) ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಮ್ ಆದ್ಮಿ ಪಾರ್ಟಿ (ಆಪ್) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಪಂಜಾಬ್ ಮಾದರಿಯಲ್ಲಿ ಆನ್‌ಲೈನ್ ಮೂಲಕ ಮನೆಗೇ ಪಡಿತರ ತಲುಪಿಸುವ ಕ್ರಾಂತಿಕಾರಿ ನಿರ್ಧಾರವನ್ನು ಕರ್ನಾಟಕದಲ್ಲೂ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಕೆ.ಎಸ್.ಆರ್.ಟಿ.ಸಿ ಅಂತರರಾಜ್ಯ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಗೊಂದಲಗಳನ್ನು ನಿವಾರಿಸಬೇಕೆಂದೂ ಅವರು ಸರ್ಕಾರಕ್ಕೆ ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವಾಸುದೇವ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್. ಎಲ್. ಪಿಂಟೊ, ದಕ್ಷಿಣ ಕನ್ನಡ ಮಹಿಳಾ ಘಟಕದ ಅಧ್ಯಕ್ಷೆ ಸೀಮಾ ಮಡಿವಾಳ ಹಾಗೂ ಜಿಲ್ಲಾ ಕಾರ್ಯದರ್ಶಿಗಳಾದ ಕಬೀರ್ ಕಾಟಿಪಳ್ಳ, ಗ್ಲ್ಯಾಬಿನ್ ಡಿಸೋಜ ಮತ್ತು ಲೆಸ್ಲಿ ಫೆರ್ನಾಂಡಿಸ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ