ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆ ಮಕ್ಕಳಿಗೆ ಎಂಸಿಫ್ ಸಿ ಎಸ್ ಆರ್ ನಿಧಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಸಮವಸ್ತ್ರ ವಿತರಣೆ ಅಕ್ಟೋಬರ್ 28 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮವಸ್ತ್ರ ವಿತರಣೆ ಮಾಡಲಿದ್ದಾರೆ.ಸಾಹಸ ಪ್ರವಾಸೋದ್ಯಮ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ಕುತ್ಲುರು ಗ್ರಾಮದ ಪ್ರತಿನಿಧಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಯತೀಶ್ ಸನ್ಮಾನಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಎಂಸಿಫ್ ಕಂಪನಿ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್. ಎಸ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಚೇತನ್ ಮೆಂಡೋನ್ಸ, ಸಾರ್ವಜನಿಕ ಸಂಪರ್ಕಧಿಕಾರಿ ಅವಿನಂದನ್, ಕುತ್ಲುರು ಸರಕಾರಿ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಉಪಸ್ಥಿತರಿಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.