image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕುಡ್ಲದ ಪಿಲಿಪರ್ಬ-2026: ನವರಾತ್ರಿಯ ಮೊದಲ ದಿನ ಚಪ್ಪರ ಮುಹೂರ್ತದ ಮೂಲಕ ಚಾಲನೆ

ಕುಡ್ಲದ ಪಿಲಿಪರ್ಬ-2026: ನವರಾತ್ರಿಯ ಮೊದಲ ದಿನ ಚಪ್ಪರ ಮುಹೂರ್ತದ ಮೂಲಕ ಚಾಲನೆ

ಮಂಗಳೂರು:ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಡೆಯಲಿರುವ ಐದನೇ ವರ್ಷದ "ಕುಡ್ಲದ ಪಿಲಿ ಪರ್ಬ-2026" ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಿತು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು "ದಸರಾ ಸಂದರ್ಭದಲ್ಲಿ ಇಡೀ ತುಳುನಾಡಿನಲ್ಲೇ ಹುಲಿವೇಷದ ಸಂಭ್ರಮ ಮನೆ ಮಾಡಿರುತ್ತದೆ. ಇಂದು ಈ ನೆಲದ ಕಲೆ ತುಳುನಾಡು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 18 ಭಾನುವಾರದಂದು ನಡೆಯಲಿರುವ ಐದನೇ ವರ್ಷದ ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ ಹುಲಿವೇಷ ತಂಡಗಳಿಗೂ ಶುಭಹಾರೈಕೆಗಳು. ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಲಿರುವ ಸಾರ್ವಜನಿಕರೆಲ್ಲರಿಗೂ ಪ್ರೀತಿಯ ಸ್ವಾಗತ ಬಯಸುತ್ತಾ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಸಾಧಿಸಲಿ, ಎಂದು ಶುಭ ಹಾರೈಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಯತೀಶ್ ಬೈಕಂಪಾಡಿ, ಕಮಲಾಕ್ಷ ಬಜಿಲಕೇರಿ, ಕಿರಣ್ ಶೆಣೈ, ನರೇಶ್ ಪ್ರಭು, ಜಗದೀಶ್ ಕದ್ರಿ, ಲಲಿತ್ ಮೆಂಡನ್ ಸೇರಿದಂತೆ ಪ್ರತಿಷ್ಠಾನದ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ