image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕುದ್ರೋಳಿಯಲ್ಲಿ ವೈಭವದ ಮಂಗಳೂರು ದಸರಾ ಆರಂಭ

ಕುದ್ರೋಳಿಯಲ್ಲಿ ವೈಭವದ ಮಂಗಳೂರು ದಸರಾ ಆರಂಭ

ಮಂಗಳೂರು : ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ವೈಭವಕ್ಕೆ ರವಿವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ ದರ್ಬಾರ್ ಮಂಟಪದಲ್ಲಿ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿಯೊಂದಿಗೆ ಸ್ಪಂದ ಮಾತೆ, ಕಾತ್ಯಾಯನಿ, ಮಹಾಕಾಳಿ, ಮಹಾಗೌರಿ, ಸಿದ್ಧಿದಾತತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.  

​ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್.ಪೂಜಾರಿ ವಾರದಿಗಾರರ ಜೊತೆ ಮಾತನಾಡಿ, ಬ್ರಿ. ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಹಾಗೂ ಆಡಳಿತ ಮತ್ತು ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಈ ಬಾರಿಯ ಮಂಗಳೂರು ದಸರಾ ಆರಂಭವಾಗಿದೆ ಎಂದರು. ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳ ಜೊತೆಗೆ ಅ.20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವೂ ನಡೆಯಲಿದೆ. ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಒಂದು ಸಾವಿರಕ್ಕೂ ಅಧಿಕ ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.  

​ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ವೇದವ್ಯಾಸ ಕಾಮತ್, ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭಾಗವಹಿಸಿದ್ದರು. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಮ್, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ ಸೇರಿದಂತೆ ಆಡಳಿತ ಮಂಡಳಿಯ ಟ್ರಸ್ಟಿಗಳು, ಸಮಿತಿಯ ಪ್ರಮುಖರು ಮತ್ತು ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ