image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡನೀಯ - ಪ್ರದೀಪ್ ಸರಿಪಲ್ಲ

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡನೀಯ - ಪ್ರದೀಪ್ ಸರಿಪಲ್ಲ

ಮಂಗಳೂರು: ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ ಎಂದು ವಿಶ್ವಹಿಂದೂ ಪರಿಷತ್ ನ ಜಿಲ್ಲಾ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.
​ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ. ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ ಎಂದಿದ್ದಾರೆ.

ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

Category
ಕರಾವಳಿ ತರಂಗಿಣಿ