image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 10 ವಿದ್ಯಾರ್ಥಿಗಳು ಉತ್ತೀರ್ಣ

ಎನ್‌ಡಿಎ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 10 ವಿದ್ಯಾರ್ಥಿಗಳು ಉತ್ತೀರ್ಣ

ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ (ಎನ್‌ಎ) ಪ್ರವೇಶ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.

ಪ್ರಣವ್ ಜಜ್ಜು, ವಿನಯ್ ಎನ್., ನಂಕರ್ ರಾಜೇಶ್, ಅದ್ವೈತ್ ವಿಕ್ರಾಂತ್ ಶಿಂದೆ, ವಿವೇಕ್ ಎ., ಅಮೋಘ್ ಎನ್. ಬಿ., ಎಂ. ಯೂಸುಫ್ ಎನ್. ಎಸ್., ಸಾಹೀಶ್ ಪಿ. ಟಿ., ಪ್ರಹ್ಲಾದ್ ಡಿ. ಆರ್. ಹಾಗೂ ಸಂಹಿತ್ ವಿ. ಆರ್. ಅವರು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಎನ್‌ಡಿಎ ಪರೀಕ್ಷೆಯ ಸಿದ್ಧತೆಗಾಗಿ ಕಾಲೇಜಿನಿಂದ ವಿಶೇಷ ತರಬೇತಿ, ಅಡಕು ಪರೀಕ್ಷೆಗಳು ಹಾಗೂ ಮಾರ್ಗದರ್ಶನ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಈ ಪರೀಕ್ಷೆಯ ಮೂಲಕ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Category
ಕರಾವಳಿ ತರಂಗಿಣಿ