ಮಂಗಳೂರು: ಜೆಪ್ಪು ಮಹಾಕಾಳಿಪಡ್ಡುವಿನಲ್ಲಿ ಸ್ಥಳೀಯ ಮಕ್ಕಳು ಹಾಗೂ ಸಾರ್ವಜನಿಕರು ಆಟವಾಡಲು ಬಳಸುತ್ತಿದ್ದ ಮೈದಾನದ ಅಭಿವೃದ್ಧಿಗಾಗಿ ವಿಧಾನ ಪರಿಷತ್ ಶಾಸಕ ಐವನ್ ಡಿ'ಸೋಜಾ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಸ್ಥಳೀಯರ ಬೇಡಿಕೆಯ ಮೇರೆಗೆ ಮೈದಾನದಲ್ಲಿ ಸ್ಟೇಡಿಯಂ ಮಾದರಿಯ ವ್ಯವಸ್ಥೆ ಹಾಗೂ ಫ್ಲಡ್ಲೈಟ್ಗಳನ್ನು ಅಳವಡಿಸಿ ರಾತ್ರಿ ವೇಳೆಯಲ್ಲೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನವರಾತ್ರಿ ಹಬ್ಬದ ಸಂದರ್ಭದಲ್ಲಿ ಈ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದಲೂ ಹೆಚ್ಚಿನ ಅನುದಾನ ಒದಗಿಸಿ ಮೈದಾನವನ್ನು ಹಂತ ಹಂತವಾಗಿ ಸುಸಜ್ಜಿತಗೊಳಿಸಲಾಗುವುದು ಎಂದು ಶಾಸಕ ಐವನ್ ಡಿ'ಸೋಜಾ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ಕಾರ್ಪೊರೇಟರ್ ಶ್ರೀ ಭಾಸ್ಕರ್ ರಾವ್, ವಿವಿಧ ಕಾಂಗ್ರೆಸ್ ಮುಖಂಡರು, ಸ್ಥಳೀಯ ಸೇವಾ ಸಮಿತಿಗಳು, ಕ್ರೀಡಾ ಕ್ಲಬ್ಗಳ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.