image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತಂತ್ರಜ್ಞಾನಕ್ಕೆ ಶಿಕ್ಷಕರು ತೆರೆದುಕೊಳ್ಳಬೇಕು: ವಿವೇಕ್ ಆಳ್ವ

ತಂತ್ರಜ್ಞಾನಕ್ಕೆ ಶಿಕ್ಷಕರು ತೆರೆದುಕೊಳ್ಳಬೇಕು: ವಿವೇಕ್ ಆಳ್ವ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿದ್ದು, ಶಿಕ್ಷಕರು ಜಿಟಿ ತಂತ್ರಜ್ಞಾನದ ಬಳಕೆಯಲ್ಲಿ ಪರಿಣತಿ ಬೆಳೆಸಿಕೊಂಡು ವಿದ್ಯಾರ್ಥಿಗಳಿಗೆ ಸಮರ್ಥವಾಗಿ ಮಾರ್ಗದರ್ಶನ ನೀಡುವ ಸಾಮರ್ಥ್ಯ ಹೊಂದಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು. ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಸಕ್ಷಮ- ಆಳ್ವಾಸ್‌ನ ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ 'ಶಿಕ್ಷಕರಿಗಾಗಿ ಜನರೇಟಿವ್ ಎಐ' ಕುರಿತ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳ ಅಗತ್ಯಗಳಿಗೆ ತಕ್ಕಂತೆ ಬೋಧನಾ ವಿಧಾನಗಳನ್ನು ನವೀಕರಿಸಿಕೊಳ್ಳುವುದು ಮತ್ತು ಕೃತಕ ಬುದ್ಧಿಮತ್ತೆಯ ಪರಿಣಾಮಕಾರಿ ಬಳಕೆಯ ಬಗ್ಗೆ ಅರಿತುಕೊಳ್ಳುವುದು ಅನಿವಾರ್ಯ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಆಲ್ವಿನ್ ಎಡಿಸನ್ ಮೆಂಡೊನ್ಸಾ ಎಐ ಸಾಧನಗಳಿಂದ ನಿಖರ ಉತ್ತರಗಳನ್ನು ಪಡೆಯಲು ಅನುಸರಿಸಬೇಕಾದ 'ಆರ್ಟಿಸಿಪಿ' ಸೂತ್ರದ ಕುರಿತು ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ. ಪೀಟರ್ ಫೆರ್ನಾಂಡೀಸ್, ಸಂಚಾಲಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಹಾಗೂ ಸಂಯೋಜಕಿ ಡಾ. ಸಾಕ್ಷಿ ಎಸ್. ಕಾಮತ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ