image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತುಳು ಭಾಷಾ ಕಲಿಕಾ ಪುಸ್ತಕಗಳು ಬಿಡುಗಡೆ

ತುಳು ಭಾಷಾ ಕಲಿಕಾ ಪುಸ್ತಕಗಳು ಬಿಡುಗಡೆ

ಬೆಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು ಪುಸ್ತಕಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಬಿಡುಗಡೆ ಮಾಡಿದರು. ಇಂಗ್ಲಿಷ್ ಭಾಷಿಗರಿಗಾಗಿ ಕೆ.ಟಿ. ಗಟ್ಟಿ ಅವರ 'ಲರ್ನ್ ತುಳು ನ್ಯಾಚುರಲಿ' ಹಾಗೂ ಕನ್ನಡ ಭಾಷಿಗರಿಗಾಗಿ ಡಾ. ಯು.ಪಿ. ಉಪಾಧ್ಯಾಯರ 'ತುಳು ಕೈಪಿಡಿ' ಕೃತಿಗಳ ಪರಿಷ್ಕೃತ ಮುದ್ರಣವನ್ನು ಅಕಾಡೆಮಿ ಹೊರತಂದಿದೆ. ತುಳು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ತುಳು ಕಲಿಕೆಯ ಪುಸ್ತಕಗಳಿಗೆ ಬೇಡಿಕೆ ಬಂದಿರುವ ಕಾರಣ ಈ ಕೃತಿಗಳನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಸಚಿವರಿಗೆ ಮಾಹಿತಿ ನೀಡಿದರು. ಬೆಂಗಳೂರಿನ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ನಡೆದ ಈ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾಜಿ ಸಚಿವೆ ಡಾ. ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಮಂಜುಶ್ರೀ ಎನ್., ನಿರ್ದೇಶಕಿ ಡಾ. ಕೆ.ಎಂ. ವಸುಂಧರ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಹಾಗೂ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ