ಮಂಗಳೂರು : ಮಂಗಳೂರಿನಲ್ಲಿರುವ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವು ಧಮ೯ಕ ಮತ್ತು ಸಾಮಾಜಿಕ ಕ್ರಾಂತಿಯ ಪ್ರತೀಕವಾಗಿದೆ. ಜಾತಿ, ಮಡಿ-ಮೈಲಿಗೇ ಮತ್ತು ಅಸ್ಪೃಶ್ಯತೆಯ ವಿರುದ್ಧ ಸೆಟೆದು ನಿಂತು ಬ್ರಹ್ಮಶ್ರೀ ನಾರಾಯಣ ಗುರುಗಳ ಮಾರ್ಗದರ್ಶನದಲ್ಲಿ ಈ ಕ್ಷೇತ್ರವು 1912-1913ರ ಅವಧಿಯಲ್ಲಿ ಸ್ಥಾಪನೆಗೊಂಡಿತು. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಬಿಲ್ಲವ ಸಮುದಾಯದವರು ದೇವಸ್ಥಾನ ಪ್ರವೇಶದಿಂದ ವಂಚಿತರಾಗಿದ್ದಾಗ, ಸಾಹುಕಾರ್ ಕೊರಗಪ್ಪ ಮತ್ತು ಇತರ ಮುಖಂಡರು ನಾರಾಯಣ ಗುರುಗಳನ್ನು ಭೇಟಿ ಮಾಡಿ ತಮ್ಮ ನೋವನ್ನು ತೋಡಿಕೊಂಡರು. ಗುರುಗಳ ಆಶೀರ್ವಾದ ಹಾಗೂ ಮಾರ್ಗದರ್ಶನದಂತೆ ಮಂಗಳೂರಿನ ಕುದ್ರೋಳಿಯಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಯಿತು. ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಈ ಕ್ಷೇತ್ರದ ನವೀಕರಣವನ್ನು ಸಂಕಲ್ಪಿಸಿ ಜಗದ್ಖ್ಯಾವಾಗುವಂತೆ ಅಭಿವೃದ್ಧಿಪಡಿಸಿದ್ದಾರೆ. ಪ್ರಸ್ತುತ ಈ ಕ್ಷೇತ್ರದಲ್ಲಿ ಅನ್ನದಾನ ಸೇವೆಯು ನಿರಂತರವಾಗಿ ನಡೆಯುತ್ತಿದ್ದು, ನವರಾತ್ರಿ ಸೇರಿದಂತೆ ವಿವಿಧ ಧಾರ್ಮಿಕ ಉತ್ಸವಗಳಲ್ಲಿ ಲಕ್ಷಾಂತರ ಭಕ್ತರು ಅನ್ನಪ್ರಸಾದ ಸ್ವೀಕರಿಸುತ್ತಾರೆ.