image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪುತ್ತೂರು ದೇಗುಲದ ಕೋಟ್ಯಂತರ ರೂ. ಮೌಲ್ಯದ ಜಾಗ ವಶಕ್ಕೆ,- ಶಾಸಕ ಅಶೋಕ್ ರೈ

ಪುತ್ತೂರು ದೇಗುಲದ ಕೋಟ್ಯಂತರ ರೂ. ಮೌಲ್ಯದ ಜಾಗ ವಶಕ್ಕೆ,- ಶಾಸಕ ಅಶೋಕ್ ರೈ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ 30 ರಿಂದ 40 ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ನಿರ್ದಾಕ್ಷಿಣ್ಯವಾಗಿ ವಶಕ್ಕೆ ಪಡೆಯಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಆಸ್ತಿಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರ ಪಾಲಾಗಲು ಬಿಡುವುದಿಲ್ಲ ಎಂದರು. ದೇಗುಲದ ಜೀರ್ಣೋದ್ಧಾರ ಕಾಮಗಾರಿಗೆ ಸಂಬಂಧಿಸಿದ ರಾಜಕೀಯ ಪ್ರೇರಿತ ಟೀಕೆಗಳಿಂದ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ರೈ ಎಸ್ಟೇಟ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 14ನೇ ವರ್ಷದ 'ಅಶೋಕ್ ಜನಮನ' ಕಾರ್ಯಕ್ರಮವನ್ನು ನವೆಂಬರ್ 22ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು. ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರಿಗೆ ಯಾವುದೇ ಗುರುತಿನ ಚೀಟಿಯಿಲ್ಲದೆ ಉಡುಗೊರೆಗಳನ್ನು ವಿತರಿಸಲಾಗುತ್ತದೆ. ಅಂದೇ ಒಂದು ಲಕ್ಷ ಮಂದಿಗೆ ದೋಸೆ ಹಾಗೂ 30 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು. ಪುತ್ತೂರಿನ ಬಹುನಿರೀಕ್ಷಿತ 300 ಹಾಸಿಗೆಗಳ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ನಿರ್ಮಾಣದ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಪಂಚಾಯತ್ ಚುನಾವಣೆಗೂ ಮುನ್ನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶಾಸಕರು ಹೇಳಿದರು.

Category
ಕರಾವಳಿ ತರಂಗಿಣಿ