image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿಲ್ಲಾಮಟ್ಟದ ಖೋ-ಖೋ: ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಚಾಂಪಿಯನ್‍ಷಿಪ್

ಜಿಲ್ಲಾಮಟ್ಟದ ಖೋ-ಖೋ: ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಚಾಂಪಿಯನ್‍ಷಿಪ್

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡಗಳು ಅಭೂತಪೂರ್ವ ಸಾಧನೆ ಮಾಡಿವೆ. ಬಾಲಕರ ವಿಭಾಗದಲ್ಲಿ ಸತತ 19ನೇ ಬಾರಿ ಹಾಗೂ ಬಾಲಕಿಯರ ವಿಭಾಗದಲ್ಲಿ 17ನೇ ಬಾರಿಗೆ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ.

ಬಾಲಕರ ವಿಭಾಗದ ಫೈನಲ್ ಪಂದ್ಯದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ತಂಡವು ಪುತ್ತೂರಿನ ವಿವೇಕಾನಂದ ಕಾಲೇಜು ತಂಡವನ್ನು ಸೋಲಿಸಿ 19ನೇ ಬಾರಿಗೆ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆಯಿತು. ಈ ವಿಭಾಗದಲ್ಲಿ ಆಳ್ವಾಸ್‌ನ ವಿಜಯ್ ಕುಮಾರ್ ಉತ್ತಮ ಓಟಗಾರ ಪ್ರಶಸ್ತಿಯನ್ನು ಹಾಗೂ ಚೇತನ್ ಕೆ.ಪಿ. ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ತಂಡವು ಕಟೀಲಿನ ಎಸ್‌ಡಿಪಿಟಿ ಪಿಯು ಕಾಲೇಜು ತಂಡವನ್ನು ಪರಾಜಯಗೊಳಿಸಿ 17ನೇ ಬಾರಿಗೆ ಜಯಶಾಲಿಯಾಯಿತು. ಬಾಲಕಿಯರ ವಿಭಾಗದ ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿಜಯಲಕ್ಷ್ಮಿ ಉತ್ತಮ ಓಟಗಾರ್ತಿ ಪ್ರಶಸ್ತಿ ಹಾಗೂ ಲಾವಣ್ಯ ಉತ್ತಮ ಸವ್ಯಸಾಚಿ ಪ್ರಶಸ್ತಿ ಪಡೆದುಕೊಂಡರು. ಸತತ ಸಾಧನೆಗೈದು ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ