image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

SKPAಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಜಮೀನು ಮಂಜೂರಾತಿಗೆ ಐವನ್ ಡಿಸೋಜಾರಿಗೆ ಮನವಿ

SKPAಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಜಮೀನು ಮಂಜೂರಾತಿಗೆ ಐವನ್ ಡಿಸೋಜಾರಿಗೆ ಮನವಿ

ಮಂಗಳೂರು: ಕಳೆದ 36 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಛಾಯಾಗ್ರಾಹಕರ ಹಿತಾಸಕ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ಸಂಸ್ಥೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರಿ ನಿವೇಶನ ಮಂಜೂರು ಮಾಡುವಂತೆ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರವರಿಗೆ ಮನವಿ ಸಲ್ಲಿಸಲಾಗಿದೆ.

​ಸುಮಾರು 4,500ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಈ ಸಂಸ್ಥೆಯು ಛಾಯಾಗ್ರಾಹಕರಿಗೆ ವೃತ್ತಿಪರ ತರಬೇತಿ, ಶೈಕ್ಷಣಿಕ, ಆರೋಗ್ಯ ಮತ್ತು ಆರ್ಥಿಕ ನೆರವು, ರಕ್ತದಾನ ಶಿಬಿರಗಳಂತಹ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಆದರೆ ಸಂಸ್ಥೆಗೆ ಸ್ವಂತ ಕಟ್ಟಡವಿಲ್ಲದ ಕಾರಣ ಸಭೆ ಹಾಗೂ ತರಬೇತಿ ಶಿಬಿರಗಳನ್ನು ಆಯೋಜಿಸಲು ತೊಂದರೆಯಾಗುತ್ತಿದ್ದು, ಜಮೀನು ಮಂಜೂರು ಮಾಡುವಂತೆ ವಿನಂತಿಸಲಾಗಿದೆ.

​ಸಂಸ್ಥೆಯ ಮನವಿಗೆ ಸ್ಪಂದಿಸಿದ ಶಾಸಕ ಐವನ್ ಡಿಸೋಜಾ ಅವರು, SKPAಯ ಸುದೀರ್ಘ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಕಾನೂನಾತ್ಮಕವಾಗಿ ನಿವೇಶನ ಮಂಜೂರು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ರವರಿಗೆ ಶಿಫಾರಸು ಮಾಡಿದ್ದಾರೆ. ಈ ಸಂದರ್ಭದಲ್ಲಿ SKPA ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಮಾಜಿ ಸಂಚಾಲಕ ವಿಠಲ್ ಚೌಟ, ಮಾಜಿ ಜಿಲ್ಲಾಧ್ಯಕ್ಷ ಆನಂದ್ N. ಬಂಟ್ವಾಳ್ ಹಾಗೂ ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ವಿಲ್ಫ್ರೆಡ್ ಮೆಂಡೋನ್ಸಾ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ