image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಪ್ರಶಸ್ತಿ ವಿಜೇತ ಬಾಲನಟ ಅತೀಶ್ ಎಸ್. ಶೆಟ್ಟಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದಿಂದ ಭವ್ಯ ಸನ್ಮಾನ

ರಾಷ್ಟ್ರೀಯ ಪ್ರಶಸ್ತಿ ವಿಜೇತ ಬಾಲನಟ ಅತೀಶ್ ಎಸ್. ಶೆಟ್ಟಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದಿಂದ ಭವ್ಯ ಸನ್ಮಾನ

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಬಾಲನಟ ಪ್ರಶಸ್ತಿ ಭಾಜನರಾದ ಕಂಡೆಟ್ಟು ನಿವಾಸಿ ಶ್ರೀ ಅತೀಶ್ ಎಸ್. ಶೆಟ್ಟಿ ಅವರನ್ನು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಕನ್ನಡದ "ಮಿಥ್ಯ" ಚಲನಚಿತ್ರದಲ್ಲಿ ಅಭಿನಯಿಸಿ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿ ಗೆಲ್ಲುವ ಮೂಲಕ ಅತೀಶ್ ಶೆಟ್ಟಿ ಅವರು ಕನ್ನಡ ಚಿತ್ರರಂಗ ಹಾಗೂ ತುಳುನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸಾಧನೆ ಪ್ರತಿಯೊಬ್ಬರಿಗೂ ಹೆಮ್ಮೆಯ ವಿಷಯವಾಗಿದ್ದು, ಇಂತಹ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆದು ತುಳುನಾಡಿನ ಹೆಮ್ಮೆಯನ್ನು ಪಸರಿಸಲಿ ಎಂದು ಸನ್ಮಾನಿಸಿ ಹಾರೈಸಲಾಯಿತು.

ಈ ಸನ್ಮಾನ ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್ ಹಾಗೂ ರಮೇಶ್ ಹೆಗ್ಡೆ, ಉಪಾಧ್ಯಕ್ಷರಾದ ಅಜಯ್ ಕುಲಶೇಖರ್ ಮತ್ತು ಮಂಗಳಾ ಆಚಾರ್, ಕಾರ್ಯದರ್ಶಿಗಳಾದ ಅಮಿತ್ ರಾಜ್, ಜಯ ಕುಮಾರ್, ಸುರೇಖಾ ಹೆಗ್ಡೆ, ಸುಮತಿ ಚಂದ್ರಶೇಖರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿಚಂದ್ರ ಮತ್ತು ಪ್ರವೀಣ್ ನಿಡ್ಡೆಲ್ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಕಾವ್ಯ ನಟರಾಜ್ ಆಳ್ವ, ಶಕೀಲಾ ಕಾವ, ಮನೋಹರ್ ಶೆಟ್ಟಿ ಕದ್ರಿ, ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದೀಪಕ್ ಡಿಸೋಜಾ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಮೋರ್ಚಾಗಳು, ಮಹಾಶಕ್ತಿ ಕೇಂದ್ರಗಳು, ಪ್ರಕೋಷ್ಠಗಳ ಪ್ರಮುಖರು, ಶಕ್ತಿಕೇಂದ್ರ ಮತ್ತು ಬೂತ್ ಅಧ್ಯಕ್ಷರು, ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ