image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೆಸ್ಕಾಂ ವಲಯ ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಪ್ರೀಮಿಯರ್‌ ಲೀಗ್ ಹಾಗೂ ಚಿತ್ರಕಲಾ ಸ್ಪರ್ಧೆ ಯಶಸ್ವಿ

ಮೆಸ್ಕಾಂ ವಲಯ ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಪ್ರೀಮಿಯರ್‌ ಲೀಗ್ ಹಾಗೂ ಚಿತ್ರಕಲಾ ಸ್ಪರ್ಧೆ ಯಶಸ್ವಿ

ಮಂಗಳೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವತಿಯಿಂದ ಮಂಗಳೂರು ವಲಯ ಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಪ್ರೀಮಿಯರ್‌ ಲೀಗ್ ಸೀಸನ್-5 ಪಂದ್ಯಾಟ ಹಾಗೂ ಚಿತ್ರಕಲಾ ಸ್ಪರ್ಧೆಗಳು ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಅದ್ಧೂರಿಯಾಗಿ ಜರುಗಿದವು.

​ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ನೋಂಗ್ಜಾಯ್‌ ಮೊಹಮದ್‌ ಅಲಿ ಅಕ್ರಮ್‌ ಶಾ ಅವರು, ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿಯನ್ನು ಮೈಗೂಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಅವರು ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತ ರಾಹುಲ್ ರತ್ನಂ ಪಾಂಡೆ ಮಾತನಾಡಿ, ಕ್ರೀಡೆಯು ನಮ್ಮ ಮಾನಸಿಕ ಹಾಗೂ ದೈಹಿಕ ಕ್ಷಮತೆಗೆ ಅತ್ಯಂತ ಅಗತ್ಯವಾಗಿದ್ದು, ಇದು ಪ್ರತಿಯೊಬ್ಬರ ದೈನಂದಿನ ಬದುಕಿನ ಪ್ರಮುಖ ಭಾಗವಾಗಬೇಕು ಎಂದರು.

​ಈ ಕ್ರೀಡಾಕೂಟದಲ್ಲಿ ಮೆಸ್ಕಾಂ, ಕೆ.ಪಿ.ಟಿ.ಸಿ.ಎಲ್ ಜತೆಗೆ ವಿಶೇಷ ಆಹ್ವಾನಿತರಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ತಂಡಗಳು ಉತ್ಸಾಹದಿಂದ ಪಾಲ್ಗೊಂಡಿದ್ದವು. ಕ್ರೀಡಾಪಟುಗಳಿಗೆ ಸಿದ್ದಲಿಂಗಪ್ಪ ಮತ್ತು ರಮೇಶ್‌ ಶರಣಪ್ಪ ಅವರು ಪ್ರಮಾಣ ವಚನ ಬೋಧಿಸಿದರು. ಬ್ಯಾಡ್ಮಿಂಟನ್ ಸೀಸನ್-5 ರ ಪಂದ್ಯಾಟ ಆಯೋಜನಾ ಸಮಿತಿಯ ಪ್ರಭಾತ್ ಜೋಶಿ ಅವರು ಪಂದ್ಯಾಟದ ಸ್ವರೂಪದ ಕುರಿತು ವಿವರಣೆ ನೀಡಿದರೆ, ದೀಪಕ್ ಅವರು ಪಂದ್ಯದ ನಿಯಮಗಳ ಬಗ್ಗೆ ಮಾಹಿತಿ ಒದಗಿಸಿದರು.

​ಕಾರ್ಯಕ್ರಮದ ಆರಂಭದಲ್ಲಿ ಪುಷ್ಪರಾಜ್ ಸ್ವಾಗತಿಸಿದರು, ಬಿಂದು ವಂದನಾರ್ಪಣೆಗೈದರು ಮತ್ತು ಕುಮಾರಿ ಬೀನಾ ಕಾರ್ಯಕ್ರಮವನ್ನು ನಿರೂಪಿಸಿದರು. ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್. ಹಾಗೂ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ನೋಂಗ್ಜಾಯ್‌ ಮೊಹಮದ್‌ ಅಲಿ ಅಕ್ರಮ್‌ ಶಾ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿಜೇತ ಕ್ರೀಡಾಪಟುಗಳಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ತಾಂತ್ರಿಕ ನಿರ್ದೇಶಕರಾದ ಹರೀಶ್ ಕುಮಾರ್ ವಿ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರ ದೇವರಾಜ್ ಸೇರಿದಂತೆ ವಿವಿಧ ಯೂನಿಯನ್‌ಗಳ ಪ್ರಮುಖ ಪದಾಧಿಕಾರಿಗಳಾದ ಷಣ್ಮುಖಪ್ಪ, ಕೃಷ್ಣರಾಜ್, ನವೀನ್‌ಕುಮಾರ್‌, ಮಾರಪ್ಪ, ನಿತೇಶ್ ಹಾಗೂ ಮಂಗಳೂರು ಮತ್ತು ಉಡುಪಿ ಮೆಸ್ಕಾಂ ವೃತ್ತ ವ್ಯಾಪ್ತಿಯ ಕ್ರೀಡಾಪಟುಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ