ಮಂಗಳೂರು : ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಉಗಾಂಡ ಘಟಕದ ನೂತನ ಅಧ್ಯಕ್ಷರಾಗಿ ಶ್ರೀ ಸುಶಾನ್ ಪೂಜಾರಿ ಅವರು ನೇಮಕಗೊಂಡಿದ್ದಾರೆ. ಸಂಸ್ಥೆಯ ಅಂತರರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿ ಅವರು ಈ ನೇಮಕಾತಿಯನ್ನು ಮಾಡಿದ್ದಾರೆ.
ಮಂಗಳೂರು ತಾಲೂಕಿನ ಮರಕಡ ಗ್ರಾಮದ ಮೂಲದವರಾದ ಸುಶಾನ್ ಪೂಜಾರಿ ಅವರು ಕಳೆದ ಆರು ವರ್ಷಗಳಿಂದ ಉಗಾಂಡಾದ ಕಂಪಾಲದಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ಕನ್ನಡ ಹಾಗೂ ತುಳು ಭಾಷೆ, ಕಲೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಉಳಿವು ಮತ್ತು ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅನಿವಾಸಿ ತುಳುವರನ್ನು ಒಗ್ಗೂಡಿಸಿ, ಮುಂದಿನ ಪೀಳಿಗೆಗೆ ತುಳು ಸಂಸ್ಕೃತಿಯನ್ನು ಪರಿಚಯಿಸುವ ಕಾಯಕದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮರಕಡ, ಕಾವೂರು ಬಿಲ್ಲವ ಸಂಘ, ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಶನ್ ಟ್ರಸ್ಟ್(ರಿ.) ಯುವಕ ಮಂಡಲ, ಮರಕಡ ಫ್ರೆಂಡ್ಸ್ ಸರ್ಕಲ್ ಹಾಗೂ ಗುರುಶಕ್ತಿ ಕೋ-ಆಪರೇಟಿವ್ ಸೊಸೈಟಿಗಳ ಸ್ಥಾಪಕ ನಿರ್ದೇಶಕರಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಸುಶಾನ್ ಪೂಜಾರಿ ಅವರ ನೇಮಕಕ್ಕೆ ತುಳುವರ್ಲ್ಡ್ ಫೌಂಡೇಶನ್ನ ಗೌರವಾಧ್ಯಕ್ಷ ಶ್ರೀ ಶ್ರೀಹರಿನಾರಾಯಣದಾಸ ಅಸ್ರಣ್ಣ ಕಟೀಲ್, ಅಧ್ಯಕ್ಷೆ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ಶ್ರೀ ವಸಂತ ರೈ ಕುತ್ತೆತ್ತೂರು, ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ, ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ಶ್ರೀ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಹಾಗೂ ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಅವಿನ್ ಬಿ.ಆರ್. ಆಳ್ವ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಶತಮಾನೋತ್ಸವದ ಈ ಸಂದರ್ಭದಲ್ಲಿ ಲಭಿಸಿರುವ ಈ ಹೊಸ ನಾಯಕತ್ವವು ಜಾಗತಿಕ ಮಟ್ಟದಲ್ಲಿ ತುಳು ಭಾಷೆ, ಸಂಸ್ಕೃತಿ ಮತ್ತು ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಬಲ ತರಲಿದೆ ಎಂದು ಆಶಿಸಲಾಗಿದೆ.