ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಸ್ಯೂಟರನ್ನು ಸ್ವಾಧೀನ ಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಓಸಿಎಲ್ ಹಿಂಬಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್‌ಐ ಶ್ರೀಮತಿ ಶ್ರೀಕಲಾ ಕೆ.ಟಿ ರವರಿಗೆ ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀ ಶ್ರೀಕಾಂತ್ ಕೆ ರವರ ನಿರ್ದೆಶನದಂತೆ ಶ್ರೀಮತಿ ಶ್ರೀಕಲಾ ಕೆ.ಟಿ ಪಿ.ಎಸ್.ಐ ರವರು ತಮ್ಮ ಸಿಬ್ಬಂದಿಗಳ ಜೊತೆ 2-10-2024 ರಂದು 16:05 ಗಂಟೆಗೆ ಕೆ ಐ ಸಿ ಓ ಎಲ್ ಹಿಂಬಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಆರೋಪಿತರಾದ 1) ಚಂದನ್ 2) ಶರತ್ ಎಂಬವರನ್ನು ದಸ್ತಗಿರಿ ಮಾಡಿ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಇತರ ಆರೋಪಿಗಳಾದ 3) ಮಧುಸೂಧನ ಕೊಂಚಾಡಿ 4)ಧನುಷ್ ಆಕಾಶ್ ಭವನ, 5) ಮುಖೇಶ್ ದೇರೆಬೈಲ್ ನೈಜಿರಿಯಾ ದೇಶದ ಪ್ರಜೆ 6) ಮೈಕಲ್ ಬಾಲಾಜಿ@ ಅಝಬೈಕ್ ಜಾನಿ ಎಂಬವರನ್ನು ದಸ್ತಗಿರಿ ಮಾಡಿ ಆರೋಪಿಗಳ ವಶದಲ್ಲಿದ್ದ 11 ಗ್ರಾಮ್ ಕೋಕೇನ್ ಮತ್ತು ಪ್ಯಾಕೇಟ್ ಸಮೇತ 30 ಗ್ರಾಂ ತೂಕದ ಎಮ್‌ಡಿಎಮ್‌ಎ 91,000 ರೂಪಾಯಿಗಳಷ್ಟು, ಒಟ್ಟು ಮೌಲ್ಯದ ಮಾದಕ ವಸ್ತುವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿತರು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಉಪಯೋಗಿಸುತ್ತಿದ್ದ KA-02-KX-0616 ನಂಬ್ರದ ಸ್ಕೂಟರ್ ಮತ್ತು ಒಟ್ಟು 09 ಮೊಬೈಲ್‌ಗಳನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿತರು ಪೈಕಿ 05 ಜನ ಮಂಗಳೂರಿನ ನಿವಾಸಿಗಳಾಗಿದ್ದು, ಒಬ್ಬ ಆರೋಪಿ ನೈಜೀರಿಯಾ ದೇಶದವನಾಗಿರುತ್ತಾನೆ. ಆರೋಪಿಗಳೆಲ್ಲರೂ ಕ್ಯಾಟರಿಂಗ್, ಪೈಂಟಿಂಗ್ ಸೇರಿದಂತೆ ಖಾಸಗಿ ಕೆಲಸ ಮಾಡಿಕೊಂಡಿರುವುದಾಗಿದೆ. ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಅರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಈ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರವಾಲ್, ಐ.ಪಿ.ಎಸ್ ರವರ ಮಾರ್ಗದರ್ಶನಂದಂತೆ, ಕಾನೂನು & ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ ಮತ್ತು ಅಪರಾಧ & ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ನಿರ್ದೇಶನದಂತೆ, ಮಂಗಳೂರು ಉತ್ತರ ವಿಭಾಗದ ಎ.ಸಿ.ಪಿ. ಶ್ರೀ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಶ್ರೀಮತಿ ಶ್ರೀಕಲಾ ಕೆ .ಟಿ ಮತ್ತು ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಚ್.ಸಿಗಳಾದ ಪ್ರೇಮಾನಂದ, ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಚೆರಿಯನ್ ಕೆ, ಜೇಮ್ಸ್ ಸಿಪಿಸಿಗಳಾದ ಶಶಿಕುಮಾರ್, ರಾಕೇಶ್ ಎಲ್ ಎಮ್, ಮಂಜುನಾಥ ಹಾಗೂ ಮಂಗಳೂರು ನಗರ ಉತ್ತರ ಉಪ ವಿಭಾಗದ ANTI DRUG SQUAD ನ ಪಿಎಸ್‌ಐ ರಾಘವೇಂದ್ರ ಎಮ್ ನಾಯ್ಕ ಮತ್ತು ಸಿಬ್ಬಂದಿಗಳಾದ ಸುನೀಲ್ ಹೆಚ್ ಎಮ್, ವಿನಾಯಕ್, ಬಸವರಾಜ್‌ರವರುಗಳು ಭಾಗವಹಿಸಿರುತ್ತಾರೆ.