image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾಷಾಭಿಮಾನ ಕೇವಲ ಘೋಷಣೆಗಳಿಗೆ ಸೀಮಿತವಾಗಬಾರದು: ಅರವಿಂದ ಚೊಕ್ಕಾಡಿ

ಭಾಷಾಭಿಮಾನ ಕೇವಲ ಘೋಷಣೆಗಳಿಗೆ ಸೀಮಿತವಾಗಬಾರದು: ಅರವಿಂದ ಚೊಕ್ಕಾಡಿ

ಮೂಡಬಿದಿರೆ : ಮೂಡುಬಿದಿರೆಯ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಚಿಂತಕ ಅರವಿಂದ ಚೊಕ್ಕಾಡಿ ಮಾತನಾಡಿ, ಕನ್ನಡ ಭಾಷೆಯ ಬಗ್ಗೆ ನಮಗಿರುವ ಅಭಿಮಾನ ಕೇವಲ ಘೋಷಣೆಗಳಿಗೆ ಅಥವಾ ಕೊರಳಿನ ಕೂಗಿಗೆ ಸೀಮಿತವಾಗದೆ ಕರುಳಿನ ಕೂಗಾಗಿ, ದಿನನಿತ್ಯದ ಬದುಕಿನಲ್ಲಿ ಬಳಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಅದನ್ನು ಪೆಟ್ಟಿಗೆಯಲ್ಲಿಟ್ಟು ಸಂರಕ್ಷಿಸುವ ಬದಲು ಬಳಕೆಯ ಮೂಲಕ ಜೀವಂತವಾಗಿಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ನಾವು ಅಖಂಡ ಕರ್ನಾಟಕದ ಪ್ರಜೆಗಳಾಗಿದ್ದು, ಸ್ಥಳೀಯ ಭಾಷೆಗಳನ್ನು ಗೌರವಿಸುತ್ತಲೇ ಕನ್ನಡದ ಬಗೆಗಿನ ಪ್ರೀತಿ ಮತ್ತು ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಹೊಸ ತಲೆಮಾರಿನಲ್ಲಿ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವುದರ ಜೊತೆಗೆ, ಅದನ್ನು ಆಧುನಿಕ ಜ್ಞಾನ ಮತ್ತು ಸಂವಹನದ ಭಾಷೆಯಾಗಿಯೂ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಡೊಳ್ಳು ಕುಣಿತ ಹಾಗೂ ಪೂಜಾ ಕುಣಿತ ನೃತ್ಯ ಪ್ರದರ್ಶನ ನಡೆಯಿತು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಡೀನ್ ಡಾ. ವಾಸುದೇವನ್, ಕನ್ನಡ ಸಂಘದ ಸಂಯೋಜಕ ಗಣೇಶ್ ಎಂ.ಆರ್. ಹಾಗೂ ಇತರರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ