ಪುತ್ತೂರು : ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ನಡೆಸಿದ ಮೇ 2026ರ 'ಭರತನಾಟ್ಯ ಜೂನಿಯರ್' ರಾಜ್ಯಮಟ್ಟದ ಪರೀಕ್ಷೆಯಲ್ಲಿ ಬೆಳ್ಳಾರೆಯ ಕು. ಧಾತ್ರಿ ಗೌಡ ಬಿ.ಕೆ. ಅತ್ಯುತ್ತಮ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಬೆಳ್ಳಾರೆಯ 'ವೈಷ್ಣವಿ ನಾಟ್ಯಾಲಯ (ರಿ)' ಸಂಸ್ಥೆಯಲ್ಲಿ ಖ್ಯಾತ ನೃತ್ಯ ಗುರು ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.
ಪ್ರಸ್ತುತ ಪುತ್ತೂರಿನ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧಾತ್ರಿ, ಬೆಳ್ಳಾರೆಯ ಕಿರಣ್ ಆಟೋವರ್ಕ್ಸ್ ಮಾಲಕರಾದ ಶ್ರೀ ಕಿರಣ್ ಕುಮಾರ್ ಹಾಗೂ ಶ್ರೀಮತಿ ಶೈನಿ ಕಿರಣ್ ದಂಪತಿಯ ಪುತ್ರಿಯಾಗಿದ್ದಾರೆ. ಧಾತ್ರಿ ಅವರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ನೃತ್ಯ ಗುರುಗಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.