image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅಲ್ವಿದಾ 2026’ ಬೀಳ್ಕೊಡುಗೆ ಸಮಾರಂಭ ಸಂಭ್ರಮ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅಲ್ವಿದಾ 2026’ ಬೀಳ್ಕೊಡುಗೆ ಸಮಾರಂಭ ಸಂಭ್ರಮ

ಮಂಗಳೂರು: ನಗರದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್‌ಜೆಇಸಿ) ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ‘ಅಲ್ವಿದಾ 2026’ ಬೀಳ್ಕೊಡುಗೆ ಸಮಾರಂಭವನ್ನು ಕಾಲೇಜಿನ ಕಲಾಂ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಅತ್ಯಂತ ಭಾವಪೂರ್ಣವಾಗಿ ಆಯೋಜಿಸಲಾಗಿತ್ತು.

ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಸಮಾರಂಭದಲ್ಲಿ, ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಳೆದ ಅಮೂಲ್ಯ ಕ್ಷಣಗಳು ಹಾಗೂ ಸವಿನೆನಪುಗಳನ್ನು ಒಳಗೊಂಡ ವಿಶೇಷ ವಿಡಿಯೋ ಪ್ರದರ್ಶನ ನಡೆಯಿತು. ಪ್ರಾಂಶುಪಾಲರಾದ ಡಾ. ರಿಯೋ ಡಿ'ಸೋಜಾ ಅವರು ಎಲ್ಲರನ್ನೂ ಸಾಧರ ಸ್ವಾಗತಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಕೊಡುಗೆಗಳನ್ನು ಸ್ಮರಿಸಿದರು. ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ. ಕೆ. ಜ್ಯೋತಿ ದಾಮೋದರ ಅವರು ವಿದ್ಯಾರ್ಥಿಗಳ ಸಾಧನೆ ಹಾಗೂ ಮೌಲ್ಯಧಾರಿತ ಬೆಳವಣಿಗೆಯನ್ನು ಶ್ಲಾಘಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿಗಳ ಪರವಾಗಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಹನಿ ಮೊಹಮ್ಮದ್ ಕೈಫ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ರಿಯೋನಾ ಲಸ್ರಾದೊ ಅವರು ತಮ್ಮ ಶೈಕ್ಷಣಿಕ ಅನುಭವಗಳನ್ನು ಹಂಚಿಕೊಂಡು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು. ಕಾಲೇಜಿನ ಸಹಾಯಕ ನಿರ್ದೇಶಕರಾದ ವಂ. ಫಾ. ಕೆನ್ನೆತ್ ರೇನರ್ ಕ್ರಾಸ್ತಾ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಸಂಚಾಲಕಿ ಧನ್ಯಾ ಆರ್. ಪೊಡುವಾಲ್ ಅವರು ವಂದನಾರ್ಪಣೆ ನೆರವೇರಿಸಿದರು. ಸಮಾರಂಭವು ಕಾಲೇಜು ಗೀತೆಯೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

Category
ಕರಾವಳಿ ತರಂಗಿಣಿ