image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 62 ಪದಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಸ್ವರಾಜ್ಯ ಮೈದಾನದಲ್ಲಿ ಜರುಗಿದ ಈ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು 32 ಚಿನ್ನ ಮತ್ತು 30 ಬೆಳ್ಳಿ ಪದಕಗಳನ್ನು ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ 122 ಅಂಕ ಹಾಗೂ ಬಾಲಕಿಯರ ವಿಭಾಗದಲ್ಲಿ 116 ಅಂಕಗಳನ್ನು ಗಳಿಸುವ ಮೂಲಕ ಒಟ್ಟು 238 ಅಂಕಗಳೊಂದಿಗೆ ಉಭಯ ವಿಭಾಗಗಳಲ್ಲೂ ಸಮಗ್ರ ಪ್ರಶಸ್ತಿ ಆಳ್ವಾಸ್ ಪಾಲಾಯಿತು. ಕ್ರೀಡಾಕೂಟದಲ್ಲಿ ಸಾಧನೆಗೈದ ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ