image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ 'ವಿಕಸಿತ ಭಾರತ ಯುವ ಸಂವಾದ ನೋ ಯುವರ್ ವೋಟ್' ಕಾರ್ಯಕ್ರಮ

ಪುತ್ತೂರಿನಲ್ಲಿ 'ವಿಕಸಿತ ಭಾರತ ಯುವ ಸಂವಾದ ನೋ ಯುವರ್ ವೋಟ್' ಕಾರ್ಯಕ್ರಮ

ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ ದಕ್ಷಿಣ ಕನ್ನಡ, ವಿವೇಕಾನಂದ ಕಾಲೇಜು ಪುತ್ತೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಇವುಗಳ ಸಂಯುಕ್ತ ಆಶ್ರಯದಲ್ಲಿ 'ವಿಕಸಿತ ಭಾರತ ಯುವ ಸಂವಾದ ನೋ ಯುವರ್ ವೋಟ್' ಜಾಗೃತಿ ಕಾರ್ಯಕ್ರಮವನ್ನು ವಿವೇಕಾನಂದ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಪ್ರಜಾಪ್ರಭುತ್ವದ ನೈಜ ಶಕ್ತಿ ಯುವಜನರ ಕೈಯಲ್ಲಿದೆ ಎಂದರು. ಪ್ರತಿಯೊಬ್ಬ ಯುವಕನೂ ತನ್ನ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಹಾಗೂ ಮತದಾನವು ಕೇವಲ ಹಕ್ಕಲ್ಲ, ಅದೊಂದು ಪ್ರಮುಖ ಕರ್ತವ್ಯ ಎಂದು ಅವರು ಕಿವಿಮಾತು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಕ್ಷೇತ್ರಕ್ಕೆ ಸೀಮಿತವಾಗದೆ ದೇಶದ ಭವಿಷ್ಯ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ದಕ್ಷಿಣ ಕನ್ನಡದ ಯೂತ್ ಐಕಾನ್ ಅಭಿಜಯ್ ಎನ್.ಎಸ್. ಮಾತನಾಡಿ, ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಂದು ಮತವೂ ಪವಿತ್ರವಾಗಿದೆ. ಕೇವಲ ಮತ ಚಲಾಯಿಸುವುದಷ್ಟೇ ಅಲ್ಲದೆ, ಪ್ರಾಮಾಣಿಕತೆಯಿಂದ ಮತದಾನ ಮಾಡುವುದು ಮುಖ್ಯ. ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮೈ ಭಾರತ್ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ, ಎನ್‌ಎಸ್‌ಎಸ್ ಅಧಿಕಾರಿಗಳಾದ ಡಾ. ಅರುಣ್ ಪ್ರಕಾಶ್ ಹಾಗೂ ವಿದ್ಯಾ ಕೆ.ಎನ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ