image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್ ಹಾಗೂ ಜೆ.ಕೆ. ರೈ ಅವರ ನಿಧನಕ್ಕೆ ಮಂಗಳೂರಿನಲ್ಲಿ ನುಡಿನಮನ

ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್ ಹಾಗೂ ಜೆ.ಕೆ. ರೈ ಅವರ ನಿಧನಕ್ಕೆ ಮಂಗಳೂರಿನಲ್ಲಿ ನುಡಿನಮನ

ಮಂಗಳೂರು : ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ (ರಿ.), ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ರಾಮಚಂದ್ರ ರಾವ್ ಮತ್ತು ಸುಳ್ಯದ ಜೆ.ಕೆ. ರೈ ಅವರ ನಿಧನಕ್ಕೆ ಸಂತಾಪ ಸೂಚಿಸಿ ನುಡಿನಮನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಉಪಸ್ಥಿತರಿದ್ದರು.

ಅಲ್ಲದೆ, ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಗುರುರಾಜ್ ಪಣಿಯಾಡಿ, ಜಿಲ್ಲಾ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್, ಕಾರ್ಯದರ್ಶಿ ಸುರೇಶ್ ಡಿ. ಪಳ್ಳಿ, ಸತೀಶ್ ಇರಾ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್, ಕಿರಣ್ ಸಿರ್ಸಿಕರ್, ಗಿರೀಶ್ ಅಡ್ಪಂಗಾಯ ಮತ್ತು ಹರೀಶ್ ಮೋಟುಕಾನ ಸೇರಿದಂತೆ ಹಲವು ಪತ್ರಕರ್ತರು ಭಾಗವಹಿಸಿ ಅಗಲಿದ ಚೇತನಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Category
ಕರಾವಳಿ ತರಂಗಿಣಿ