image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ 28ನೇ ವಾರ್ಷಿಕೋತ್ಸವ ಸಂಭ್ರಮ

ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ 28ನೇ ವಾರ್ಷಿಕೋತ್ಸವ ಸಂಭ್ರಮ

ತುಂಬೆ/ಯುಎಇ: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (GMU) ತನ್ನ 28ನೇ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದೆ. ಥುಂಬೈ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ. ಥುಂಬೈ ಮೊಯ್ದೀನ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ನಾಯಕರು, ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಥುಂಬೈ ಮೊಯ್ದೀನ್, ನಮ್ಮ ಆಸ್ಪತ್ರೆಗಳಲ್ಲಿ ಜನಿಸಿದ ವಿದ್ಯಾರ್ಥಿಗಳು, ಮರಳಿ ಬಂದು ಕೆಲಸ ಮಾಡುತ್ತಿರುವ ಹಳೆ ವಿದ್ಯಾರ್ಥಿಗಳು ಮತ್ತು ಅವರ ಮಕ್ಕಳನ್ನು ಒಂದೇ ವೇದಿಕೆಯಲ್ಲಿ ನೋಡುವುದು ಹೆಮ್ಮೆಯ ವಿಷಯ ಎಂದರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಂಡ ವೆಂಕಟರಮಣ ಮಾತನಾಡಿ, ವೈದ್ಯಕೀಯ ಶಿಕ್ಷಣ, ಸಂಶೋಧನೆ ಮತ್ತು ಆರೋಗ್ಯ ರಕ್ಷಣೆಯಲ್ಲಿ ಸಂಸ್ಥೆಯು ಸಾಧಿಸಿರುವ ಶ್ರೇಷ್ಠತೆಯನ್ನು ಕೊಂಡಾಡಿದರು. ಇತ್ತೀಚಿನ ವರ್ಷಗಳಲ್ಲಿ ಜಿಎಂಯು ಹಲವು ಅಂತರರಾಷ್ಟ್ರೀಯ ಮೈಲಿಗಲ್ಲುಗಳನ್ನು ಸಾಧಿಸಿದ್ದು, ಟೈಮ್ಸ್ ಹೈಯರ್ ಎಜುಕೇಷನ್ ವರ್ಲ್ಡ್ ಯೂನಿವರ್ಸಿಟಿ ರ‍್ಯಾಂಕಿಂಗ್ಸ್ 2027ರಲ್ಲಿ ಅಂತರರಾಷ್ಟ್ರೀಯ ದೃಷ್ಟಿಕೋನಕ್ಕಾಗಿ (International Outlook) ಜಗತ್ತಿನಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿದೆ. ಪ್ರಸ್ತುತ ವಿಶ್ವವಿದ್ಯಾಲಯವು 7 ಕಾಲೇಜುಗಳು ಮತ್ತು 45 ಮಾನ್ಯತೆ ಪಡೆದ ಕೋರ್ಸ್‌ಗಳನ್ನು ಹೊಂದಿದ್ದು, 117ಕ್ಕೂ ಹೆಚ್ಚು ರಾಷ್ಟ್ರಗಳ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. 5,000ಕ್ಕೂ ಅಧಿಕ ಪದವೀಧರರು ಜಗತ್ತಿನಾದ್ಯಂತ ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Category
ಕರಾವಳಿ ತರಂಗಿಣಿ