ಪುತ್ತೂರು : ನೆಹರೂನಗರ-ಬನ್ನೂರು-ಹಾರಾಡಿ ರಸ್ತೆ ರಿಪೇರಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ನವೆಂಬರ್ 5 ರಿಂದ ಡಿಸೆಂಬರ್ 15 ರವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ. ಕಾಮಗಾರಿ ಪೂರ್ಣಗೊಳಿಸುವ ಸಲುವಾಗಿ ರಸ್ತೆಯ ಅರ್ಧ ಭಾಗದಲ್ಲಿ ಮಾತ್ರ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಉಳಿದ ಅರ್ಧ ಭಾಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಉಪ್ಪಿನಂಗಡಿ ಮತ್ತು ಮಂಗಳೂರು ನಡುವೆ ಸಂಚರಿಸುವ ವಾಹನಗಳು ಬೋಳುವಾರು ಮೂಲಕ ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.