ಮಂಗಳೂರು : ನವೆಂಬರ್ 14 ರಿಂದ 20ರವರೆಗೆ ರಾಜ್ಯಾದ್ಯಂತ ಆಚರಿಸಲಾ ಗುತ್ತಿರುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ ಸಮಾರಂಭವು ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.'ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲಾಧಾರಿತ, ವೃತ್ತಿಪರ ಸೇವೆ’ ಎಂಬ ಧ್ಯೇಯದೊಂದಿಗೆ ನಡೆಯುವ ಈ ವರ್ಷದ ಸಪ್ತಾಹದಲ್ಲಿ ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ವಿಷಯದ ಕುರಿತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನವೆಂಬರ್ 20 ರಂದು
ಕರಾವಳಿ ಉತ್ಸವ ಮೈದಾನ ಇಲ್ಲಿ ಪೂರ್ವಾಹ್ನ 10.00 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ.. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ಗಳು/ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಮಟ್ಟದ ಸಹಕಾರ ಸಪ್ತಾಹ ಆಚರಣೆಯ ಸಮಾರಂಭವನ್ನು ಕರ್ನಾಟಕ ಸರ್ಕಾರದ ಮಾನ್ಯ ಸಹಕಾರ ಸಚಿವರಾದ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ಇವರು ಉದ್ಘಾಟಿಸಲಿರುವರು. “ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ"ವನ್ನು ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಇವರು ಮಾಡಲಿರುವರು. "ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ"ವನ್ನು ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷಜಿ.ಟಿ. ದೇವೇಗೌಡ ಇವರು ನೆರವೇರಿಸಲಿದ್ದಾರೆ.
"ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಉಡುಪಿ/ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸ ಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹ ಣವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ನೆರವೇರಿಸಲಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ జిಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ರವರು ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಪರಿಷತ್ ಮಾನ್ಯ ಶಾಸಕರುಗಳಾದ ಐವನ್ ಡಿ.ಸೋಜಾ,ಮಂಜುನಾಥ ಭಂಡಾರಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ। ಭರತ್ ಶೆಟ್ಟಿ ವೈ, ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ, ಕರ್ನಾಟಕ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಇವರು ಭಾಗವಹಿಸಲಿರುವರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ ಅಧ್ಯಕ್ಷ ರವಿರಾಜ್ ಹೆಗ್ಡೆ ಇವರು ಗೌರವ ಉಪಸ್ಥಿತರಿರುವರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ
ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭದಲ್ಲಿ "ಸಹಕಾರ ಮಾಣಿಕ್ಯ ಪ್ರಶಸ್ತಿ"ಯನ್ನು ನೀಡಲು ನಿರ್ಧರಿಸಲಾಗಿದ್ದು, ಈ ಬಾರಿಯೂ 2025-26ರಲ್ಲ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಿ ಆಯ್ಕೆಗೊಂಡ 4 ಸಹಕಾರಿ ಸಂಘಗಳಿಗೆ "ಸಹಕಾರ ಮಾಣಿಕ್ಯ ಪ್ರಶಸ್ತಿ"ಯ ಜೊತೆಗೆ 5 ಗ್ರಾಂ ಚಿನ್ನದ ಪದಕ, ರೂ.10,000/- ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು.ಜಾ.ಕೆ.ಮಾಧವ ಗೌಡ,ಕೆ.ಪದ್ಮನಾಭ ಕೊಟ್ಟಾರಿ,ವಸಂತ್ ಬೆರ್ನಾಡ್,ಬೆಳ್ವೆ ಜಯರಾಮ ಶೆಟ್ಟಿ ಸೇರಿದಂತೆ ನಾಲ್ವರಿಗೆ ಸಮಾರೋಪ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಹಕಾರಿಗಳಿಗೆ'ಸಹಕಾರಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಅತ್ಯತ್ತಮ ಸ್ವ ಸಹಾಯ ಗಂಪುಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಶಶಿಕುಮಾರ್ ರೈ,ಜಯರಾಜ ರೈ,
ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಮೊದಲಾದ ವರು ಉಪಸ್ಥಿತರಿದ್ದರು.