ಮಂಗಳೂರು: ನವೆಂಬರ್ 16ರ ಮಧ್ಯಾಹ್ನ 12.30ಕ್ಕೆ ಪಾದುವ ಆಡಿಟೋರಿಯಂನಲ್ಲಿ ತುಳುವಿನಿಂದ ಇಂಗ್ಲಿಷ್‌ಗೆ ಅನುವಾದಿಸಲಾದ ತುಳುನಾಡಿನ ಜನಪದ ಕಥೆಗಳ ಸರಣಿಯ ಐದು ಕೃತಿಗಳ ಬಿಡುಗಡೆ ಸಮಾರಂಭ ನಡೆಯಲಿದೆ. ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಗಣೇಶ್ ಎಸ್. ರಾವ್ ಅವರು ಈ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಸ್ತಾವನೆ ಮಾಡಲಿದ್ದು, ಪಾದುವ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್‌ನ ಪ್ರಾಂಶುಪಾಲ ವಂದನೀಯ ಅರುಣ್ ವಿಲ್ಸನ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾದುವ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರೊಸಿನ್ ಫ್ಲಾರೆನ್ಸ್ ಡಿಸೋ’ಜ, ಪೋಷಕರ-ಶಿಕ್ಷಕರ ಸಂಘದ ಅಧ್ಯಕ್ಷೆ ಮಮತಾ, ವಿದ್ಯಾರ್ಥಿ ಪ್ರತಿನಿಧಿ ವೈಷ್ಣವಿ ಹಾಗೂ ಅಕಾಡೆಮಿಯ ಸದಸ್ಯೆ ಅಕ್ಷಯ ಆರ್. ಶೆಟ್ಟಿ ಉಪಸ್ಥಿತರಿರಲಿದ್ದಾರೆ.