ಮಂಗಳೂರು : ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ ‘ಸಿನರ್ಜಿಯಾ–2026’ರ ಎರಡನೇ ದಿನವಾದ ನವೆಂಬರ್ 13ರಂದು ‘ಏರೋಫಿಲಿಯಾ–2026’ ಏರ್ ಶೋ ಅತ್ಯಂತ ಆಕರ್ಷಕವಾಗಿ ನಡೆಯಿತು. ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಮತ್ತು ತಾಂತ್ರಿಕ ಕೌಶಲ್ಯದಿಂದ ಸ್ವತಃ ವಿನ್ಯಾಸಗೊಳಿಸಿ ತಯಾರಿಸಿದ ವಿವಿಧ ಮಾದರಿಯ ವಿಮಾನಗಳು ಆಕಾಶದಲ್ಲಿ ಹಾರಾಡಿ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆದವು. ಟಿಫ್ ಲ್ಯಾಬ್ಸ್ ಸಂಸ್ಥೆಯ ಸಂಸ್ಥಾಪಕರಾದ ಡೇನಿಯಲ್ ಡಿಸೋಜಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಪ್ರಯತ್ನವನ್ನು ಶ್ಲಾಘಿಸಿದರು. ಸುಮಾರು 3,000 ವಿದ್ಯಾರ್ಥಿಗಳು ಈ ರೋಮಾಂಚಕ ಏರ್ ಶೋಗೆ ಸಾಕ್ಷಿಯಾದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಸೃಜನಶೀಲತೆಯನ್ನು ಬೆಳೆಸುವ ಹಾಗೂ ಪಠ್ಯಪುಸ್ತಕದ ಜ್ಞಾನವನ್ನು ಪ್ರಾಯೋಗಿಕವಾಗಿ ಅನ್ವಯಿಸಲು ಅವಕಾಶ ಕಲ್ಪಿಸುವ ಮೂಲಕ ಈ ಕಾರ್ಯಕ್ರಮವು ಸಿನರ್ಜಿಯಾ–2026ರ ಪ್ರಮುಖ ಆಕರ್ಷಣೆಯಾಗಿ ಮೂಡಿಬಂತು.