image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್: ಹರ್ಷಲ್‌ಗೆ ಚಿನ್ನದ ಪದಕ

ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್: ಹರ್ಷಲ್‌ಗೆ ಚಿನ್ನದ ಪದಕ

ಮಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ (ನ. 15) ನಡೆದ 5ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್ ಗೇಮ್ಸ್-2026ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್ ಪ್ರತಿನಿಧಿಸಿದ್ದ ಹರ್ಷಲ್ ಎನ್. ಚಿನ್ನದ ಪದಕ ಗೆದ್ದಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಒಲಿಂಪಿಕ್ ಅಸೋಸಿಯೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದ ತೌಲೋ ಸಾಂಡಾ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.

ನಗರದ ಬೊಂದೇಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿರುವ ಹರ್ಷಲ್, ಮಂಗಳೂರಿನ ಇಮ್ಮೋರ್ಟಲ್ ಮಾರ್ಷಲ್ ಆರ್ಟ್ಸ್ ಆಂಡ್ ಫಿಟ್‌ನೆಸ್ ಅಕಾಡೆಮಿಯ ಸಂಸ್ಥಾಪಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೋಹನ್ ಎಸ್. ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಇವರು ಹೊಸ ದಿಗಂತ ಪತ್ರಿಕೆಯ ಸಿಬ್ಬಂದಿಗಳಾದ ನವೀನ್‌ಚಂದ್ರ ಮತ್ತು ಜಯಶ್ರೀ ದಂಪತಿಯ ಪುತ್ರರಾಗಿದ್ದಾರೆ.

Category
ಕರಾವಳಿ ತರಂಗಿಣಿ