image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ: ಪೈಲಟ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ: ಪೈಲಟ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಮಂಗಳೂರು : ಮಂಗಳೂರು ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ತಾಂತ್ರಿಕ ದೋಷದಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತಗಳು ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿವೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 6:05ಕ್ಕೆ ಬೆಂಗಳೂರಿಗೆ ಹೊರಡಬೇಕಿದ್ದ ಇಂಡಿಗೋ ವಿಮಾನವು ರನ್‌ವೇಯಲ್ಲಿ ಟೇಕ್-ಆಫ್ ಆಗುವ ಕೊನೆಯ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಪೈಲಟ್ ಬ್ರೇಕ್ ಹಾಕಿ ವಿಮಾನವನ್ನು ಸುರಕ್ಷಿತವಾಗಿ ನಿಲ್ಲಿಸಿದ್ದು, ವಿಮಾನದಲ್ಲಿದ್ದ 229 ಪ್ರಯಾಣಿಕರು ಹಾಗೂ 7 ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ವಿಮಾನದ ವ್ಯವಸ್ಥೆ ಕಲ್ಪಿಸಲಾಯಿತು.

ಮತ್ತೊಂದೆಡೆ, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಬೆಳಿಗ್ಗೆ 7:20ಕ್ಕೆ ಹೊರಡಬೇಕಿದ್ದ ಇಂಡಿಗೋ ವಿಮಾನದಲ್ಲಿ ಇದೇ ರೀತಿಯ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಟೇಕ್-ಆಫ್‌ಗೆ ಅನುಮತಿ ಪಡೆದು ರನ್‌ವೇಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಿಮಾನವನ್ನು ಪೈಲಟ್ ತಕ್ಷಣವೇ ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ. ವಿಮಾನ ದಿಢೀರ್ ನಿಂತಿದ್ದರಿಂದ ಕ್ಯಾಬಿನ್ ಸಿಬ್ಬಂದಿ ಪ್ರಯಾಣಿಕರಿಗೆ ತಲೆ ಕೆಳಗೆ ಹಾಕುವಂತೆ ಸೂಚನೆ ನೀಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು 30 ನಿಮಿಷಗಳ ಕಾಲ ರನ್‌ವೇಯಲ್ಲೇ ನಿಂತಿದ್ದ ವಿಮಾನದಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ, ನಂತರ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಯಿತು.

Category
ಕರಾವಳಿ ತರಂಗಿಣಿ