image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳ ಕ್ರೀಡಾಂಗಣಕ್ಕೆ ಯು.ಟಿ. ಖಾದರ್ ಭೇಟಿ: ಅಧಿಕಾರಿಗಳೊಂದಿಗೆ ಚರ್ಚೆ

ಮಂಗಳ ಕ್ರೀಡಾಂಗಣಕ್ಕೆ ಯು.ಟಿ. ಖಾದರ್ ಭೇಟಿ: ಅಧಿಕಾರಿಗಳೊಂದಿಗೆ ಚರ್ಚೆ

ಮಂಗಳೂರು : ಮಂಗಳ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಯು.ಟಿ. ಖಾದರ್ ಅವರು ಬುಧವಾರ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಸ್ಥಳದಲ್ಲೇ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕ್ರೀಡಾಂಗಣದ ಪ್ರಗತಿ ಹಾಗೂ ಮುಂದಿನ ಯೋಜನೆಗಳ ಕುರಿತು ಸ್ಥಳ ಪರಿಶೀಲನೆ ವೇಳೆ ಮಾತುಕತೆ ನಡೆಯಿತು.

ಮಂಗಳ ಕ್ರೀಡಾಂಗಣವನ್ನು ಅಂತರ್‌ರಾಷ್ಟ್ರೀಯ ದರ್ಜೆಯ ಕ್ರೀಡಾಂಗಣವಾಗಿ ಮೇಲ್ದರ್ಜೆಗೇರಿಸುವ ಉದ್ದೇಶದಿಂದ 20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಈ ಚರ್ಚೆಯ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೇಜಸ್ ಶೆಟ್ಟಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಗಳು, ಕ್ರೀಡಾಪಟುಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳು ಮತ್ತು ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಅಭಿವೃದ್ಧಿ ಕುರಿತು ಎಲ್ಲರೂ ಸೇರಿ ಸಮಗ್ರ ಸಮಾಲೋಚನೆ ನಡೆಸಿದರು.

Category
ಕರಾವಳಿ ತರಂಗಿಣಿ