image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನವಂಬರ್ 22 ರಂದು ಪುರಭವನದಲ್ಲಿ ಬಂಟರ ಗ್ರಾಮ ಪ್ರತಿನಿಧಿ ಸಮ್ಮೇಳನ, ಎಜುಕೇಷನ್ ಎಕ್ಸಲೆನ್ಸಿ ಅವಾರ್ಡ್ ಸಮಾರಂಭ

ನವಂಬರ್ 22 ರಂದು ಪುರಭವನದಲ್ಲಿ ಬಂಟರ ಗ್ರಾಮ ಪ್ರತಿನಿಧಿ ಸಮ್ಮೇಳನ, ಎಜುಕೇಷನ್ ಎಕ್ಸಲೆನ್ಸಿ ಅವಾರ್ಡ್ ಸಮಾರಂಭ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ತಾಲೂಕು ಸಮಿತಿಯ ಇದರ ಆಶ್ರಯದಲ್ಲಿ ಗ್ರಾಮ ಪ್ರತಿನಿಧಿ ಸಮ್ಮೇಳನ ಮತ್ತು ಎಜುಕೇಷನಲ್ ಎಕ್ಸೆಲೆನ್ಸ್ ಅವಾರ್ಡ್ ಸಮಾರಂಭವು ನವಂಬರ್  22 ರಂದು ಭಾನುವಾರ ಮಂಗಳೂರು ಪುರಭವನದಲ್ಲಿ ಬೆಳಿಗ್ಗೆ ಗಂಟೆ 9-30 ರಿಂದ ನಡೆಯಲಿದೆ ಎಂದು ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ. ಅಜಿತ್ ಕುಮಾರ್ ರೈ ಮಾಲಾಡಿಯವರು ವಹಿಸಿಕೊಳ್ಳಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಿದ್ದಾರೆ. ಜಯಪ್ರಕಾಶ್ ಹೆಗ್ಡೆ ಮಾಜಿ ಸಚಿವರು ಕರ್ನಾಟಕ ಸರಕಾರ ಇವರು ಗ್ರಾಮ ಪ್ರತಿನಿಧಿಗಳ ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಡಾ| ವೈ ಭರತ್ ಶೆಟ್ಟಿ ಶಾಸಕರು ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರ ಇವರು ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಿದ್ದಾರೆ.  ವಿವೇಕ್ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ಆಳ್ವಾಸ್ ಎಜುಕೇಷನಲ್ ಟ್ರಸ್ಟ್ ಇವರು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ 95% ಅಂಕಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಎಜುಕೇಷನಲ್‌ ಎಕ್ಸೆಲೆನ್ಸ್ ಅವಾರ್ಡ್ ನೀಡಿ ಗೌರವಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿ ಅಶ್ವತ್ಥಾಮ್ ಹೆಗ್ಡೆ, ಉಪಸಂಚಾಲಕರು ಮಂಗಳೂರು ತಾಲೂಕು ಸಮಿತಿ  ಎಮ್. ಕರುಣಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬಂಟರ ಯಾನೆ ನಾಡವರ ಮಾತೃ ಸಂಘ ಉಲ್ಲಾಸ್ ಆರ್. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ