ಮಂಗಳೂರು: ಆಧುನಿಕ ದಕ್ಷಿಣ ಕನ್ನಡ ಪ್ರಾಂತ್ಯದ ಶಿಲ್ಪಿ ದಿ|| ಉಳ್ಳಾಲ ಶ್ರೀನಿವಾಸ್ ಮಲ್ಯರವರ 125ನೇ ಜನ್ಮ ದಿನಾಚರಣೆಯನ್ನು ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನಾಚರಣಾ ಸಮಿತಿಯ ನೇತೃತ್ವದಲ್ಲಿ ನಗರದ ಪದವು ಶಾಲೆ ಮುಂಭಾಗದಲ್ಲಿರುವ ಶ್ರೀನಿವಾಸ್ ಮಲ್ಯ ಉದ್ಯಾನವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಲ್ಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಾಮನಾಥ ರೈ, ಜನ್ಮ ದಿನಾಚರಣಾ ಸಮಿತಿ ಸಂಚಾಲಕಿ ಮಂಜುಳಾ ನಾಯಕ್, ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯ, ಅರುಂಧತಿ ಮಲ್ಯ, ನಂದನ್ ಮಲ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ ಉಪಸ್ಥಿತರಿದ್ದರು.
ಅಲ್ಲದೆ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಮೂಡಾ ಅಧ್ಯಕ್ಷ ಸಂತೋಷ್ ಶೆಟ್ಟಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೋ, ನಿಕಟಪೂರ್ವ ಪಾಲಿಕೆ ಸದಸ್ಯರಾದ ಅಬ್ದುಲ್ ರವೂಫ್, ಶಶಿಧರ್ ಹೆಗ್ಡೆ, ಅನಿಲ್ ಕುಮಾರ್, ನವೀನ್ ಡಿಸೋಜ, ಮದರ್ ತೆರೆಸಾ ವಿಚಾರ ವೇದಿಕೆ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ, ಅಕಾಡೆಮಿ ಸದಸ್ಯ ಸಮರ್ಥ ಭಟ್, ಸಮಿತಿ ಅಧ್ಯಕ್ಷ ಟಿ.ಸಿ. ಗಣೇಶ್, ನೀತು ಶರಣ್, ರಾಜೇಶ್ ದೇವಾಡಿಗ, ಯೋಗೀಶ್ ನಾಯಕ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿದರು.