image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ನಾಳೆ ಅಣಕು ಕಾರ್ಯಾಚರಣೆ; ಸಂಚಾರ ವ್ಯತ್ಯಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ನಾಳೆ ಅಣಕು ಕಾರ್ಯಾಚರಣೆ; ಸಂಚಾರ ವ್ಯತ್ಯಯ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗದಲ್ಲಿ ವಿಮಾನ ಅಪಘಾತ ಸಂಭವಿಸಿದ ಸನ್ನಿವೇಶವನ್ನು ಆಧರಿಸಿ ಶುಕ್ರವಾರ ಬೆಳಿಗ್ಗೆ 9:55 ರಿಂದ ಮಧ್ಯಾಹ್ನದವರೆಗೆ ಸಮಗ್ರ ಅಣಕು ಕಾರ್ಯಾಚರಣೆ (Integrated Mock Exercise) ನಡೆಯಲಿದೆ.

ತುರ್ತು ಪರಿಹಾರ ಕಾರ್ಯಾಚರಣೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವಿಮಾನ ನಿಲ್ದಾಣದ ಗಡಿಗೆ ಹೊಂದಿಕೊಂಡಿರುವ ಹೊರ ಪ್ರದೇಶದಲ್ಲಿ ಈ ಅಣಕು ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ವೇಳೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಆಂಬ್ಯುಲೆನ್ಸ್ ವಾಹನಗಳು ಸಂಚರಿಸಲಿವೆ.

ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ನಗರದ ಎ.ಜೆ. ಆಸ್ಪತ್ರೆ, ಫಾದರ್ ಮುಲ್ಲರ್ ಆಸ್ಪತ್ರೆ ಮತ್ತು ವೆನ್ಲಾಕ್ ಆಸ್ಪತ್ರೆಗಳಿಗೆ ಕರೆದೊಯ್ಯುವ ಅಣಕು ಪ್ರಕ್ರಿಯೆ ನಡೆಯಲಿದ್ದು, ಈ ಮಾರ್ಗಗಳನ್ನು 'ಗ್ರೀನ್ ಕಾರಿಡಾರ್' ಆಗಿ ಪರಿವರ್ತಿಸಿ ವಾಹನ ಸಂಚಾರ ನಿರ್ಬಂಧಿಸಲಾಗುವುದು. ಇದರಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ಕೋರಿದೆ.

 

Category
ಕರಾವಳಿ ತರಂಗಿಣಿ