ಮಂಗಳೂರು: ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ದಿನಾಂಕ: 10-11-2024 ಆದಿತ್ಯವಾರದಂದು ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ 'ಗದ್ದಿಗೆ' ಕರಾವಳಿ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವು ಕರ್ನಾಟಕದಾದ್ಯಂತ ಅಂದರೆ ದ.ಕ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೇರಳದ ಕಾಸರಗೋಡಿನಲ್ಲಿ ಪಸರಿಸಿರುವ ಎಲ್ಲಾ ಮರಾಟಿ ಬಂಧುಗಳ ಮನೆ-ಮನೆಗಳಿಗೆ ಸುದ್ದಿಯನ್ನು ತಲುಪಿಸಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ್ ಕೆದಿಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೀಗ 22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು ನಮ್ಮ ಈ ಸಮಾವೇಶ ಮುಖ್ಯವಾಗಿ ಶಿಕ್ಷಣ, ಸಂಘಟನೆ ಹಾಗೂ ಸ್ವಾಭಿಮಾನದ ಧೈಯಘೋಷವನ್ನು ಹೊಂದಿದ್ದೆ. ಮೂಲತ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಈ ಸಮುದಾಯದ ಸುಮಾರು ಶೇಕಾಡ 80 ರಷ್ಟು ಜನ ಇಂದಿಗೂ ಆರ್ಥಿಕವಾಗಿ ಹಿಂದುಳಿದಿದ್ದು ಇವರು ಅನೇಕ ಸಮಸ್ಯೆಗಳನ್ನು ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಹಾಗೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಅನಾವರಣೆ ಮಡುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸುಮಾರು 15 ರಿಂದ 20 ಸಾವಿರ ಜನ ಭಾಗವಹಿಸುವವರಿದ್ದಾರೆ.
ಈ ಸಮಾವೇಶದಲ್ಲಿ ಮರಾಟಿಗರ ವಿವಿಧ ಆಚಾರ-ವಿಚಾರ ಸಂಸ್ಕಾರಗಳನ್ನು ಪ್ರತಿಬಿಂಬಿಸುವ ಸಾಂಸ್ಕೃತಿ ಮೂರು ಗೋಷ್ಠಿಗಳು, ಉಪನ್ಯಾಸ ಹಾಗೂ ಸನ್ಮಾನ ಮತ್ತು ಸಾಧಕರನ್ನು ಪುರಸ್ಕರಿಸುವ ಕಾರ್ಯಕ್ರಮಗ- ನಡೆಯಲಿವೆ. ನಮ್ಮ ಮುಖ್ಯಮಂತ್ರಿಗಳಾದ ಸಮ್ಮಾನ್ಯ ಶ್ರೀ ಸಿದ್ದರಾಮಯ್ಯರವರು ಈ ಸಮಾವೇಶವನ ಉದ್ಘಾಟಿಸಲಿದ್ದು, ನಮ್ಮ ಬಹು ನಿರೀಕ್ಷೆಯ “ಗದ್ದಿಗೆ” ಸ್ಮರಣ ಸಂಚಿಕೆಯನ್ನು ಡಾ. ಎಂ. ಮೋಹ ಆಳ್ವರವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಸಮಾಜದ ಶ್ರೇಷ್ಠ ಸಾಧನೆಯ ಮಾಡಿರುವ ಪದ್ಮಶ್ರೀ ಪುರಸ್ಕೃತರಾದ ಅಮೈ ಶ್ರೀ ಮಹಾಲಿಂಗ ನಾಯ್ಕರವರನ್ನು ಸನಾ ಮಾಡಲಾಗುವುದು. ಮರಾಟಿಗರ ಅಹವಾಲುಗಳನ್ನು ನಮ್ಮ ಸಮಾವೇಶದ ಗೌರವಾಧ್ಯಕ್ಷರಾದ ಹಾ.ಕೆ.ಸುಂದರ್ ನಾಯಕ್ ರವರು ಮಾನ್ಯ ಮುಖ್ಯ ಮಂತ್ರಿಗಳಿಗೆ ಅರ್ಪಿಸಲಿದ್ದಾರೆ. ಹಾಗೆ ರಾಷ್ಟ್ರಮಟ್ಟದಲ್ಲಿ ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಸಮಾಜದ ಅನೇಕ ಸಾಧಕ ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು. ಹಾಗೆಯೇ ದಿನಾಂಕ :09-11-2024 ರಂದು ಕನಾ ಹುರಾಟಿ ಸಂಘ (ರಿ.) ಬೆಂಗಳೂರು ಇವರ ಸಹಕಾರದಿಂದ ಮರಾಟಿಗರಿಗಾಗಿಯೇ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದು ಈಗಾಗಲೇ 1500ಕ್ಕೂ ಹೆಚ್ಚು ಮರಾಟಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಶ್ರೀಧರ ನಾಯ್ಕ ಮುಂಡೋವುಮೂಲೆ, ಜತೆ ಕಾರ್ಯದರ್ಶಿ ಶೇಷಪ್ಪ ನಾಯ್ಕ, ಪದಾಧಿಕಾರಿಗಳಾದ ರತ್ನಾವತಿ, ಬಾಲಚಂದ್ರ ನಾಯ್ಕ್ ಉಪಸ್ಥಿತರಿದ್ದರು.