image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ್ ಇಂದಾಜೆಗೆ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ

ಶ್ರೀನಿವಾಸ್ ಇಂದಾಜೆಗೆ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಪ್ರದಾನ ಮಾಡಿದರು.

ಮಂಗಳೂರು ನಗರದ ಹೋಟೆಲ್ ಮೋತಿಮಹಲ್ ನಲ್ಲಿ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸಂವಹನ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಉತ್ತಮ ಸಾರ್ವಜನಿಕ ಸಂಪರ್ಕಕ್ಕಾಗಿ ನರೇಶ್ ಕುಮಾರ್ ಸ್ಮರಣಾರ್ಥ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶ್ರೀನಿವಾಸ್ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕುತ್ಲುರು ಸರಕಾರಿ ಶಾಲೆ ಅಭಿವೃದ್ಧಿ, ಮಂಗಳೂರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೂ ಶ್ರಮಿಸಿದ್ದಾರೆ.

Category
ಕರಾವಳಿ ತರಂಗಿಣಿ