ಮಂಗಳೂರು: “ನವೀಕೃತ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಅನ್ನು ನ.18ರಂದು ಮಂಗಳೂರಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ ಇವರು ಮಂಗಳೂರು ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರ ಎಂಬುದಾಗಿ ಘೋಷಿಸುವರು“ ಎಂದು ಪ್ರಧಾನ ಧರ್ಮಗುರುಗಳಾದ ವಂ ಆ್ಯಂಡ್ರೂ ಲಿಯೋ ಡಿ'ಸೋಜಾ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಉದ್ಘಾಟನೆ ಕಾರ್ಯಕ್ರಮವು ಪವಿತ್ರ ಬಲಿಪೂಜೆಯೊಂದಿಗೆ ಆರಂಭವಾಗುವುದು. ಸಾಯಂಕಾಲ 5.30 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿರುವುದು. ಈ ಸಂದರ್ಭದಲ್ಲಿ ರಾಜ್ಯದ ಮುಖಂಡರು ಮತ್ತು ಸಮಾಜದ ಗಣ್ಯರು ಉಪಸ್ಥಿತಲಿರುವರು. ನವೆಂಬರ್ 18 ರಂದು ಸಂತ ಲಾರೆನ್ಸರ ಚರ್ಚ್‌ನ ಶತಮಾನೋತ್ಸವ ಸಮಾರೋಪ, ನವೀಕೃತ ಚರ್ಚ್‌ನ ಉದ್ಘಾಟನೆ, ಆಶೀರ್ವಚನ ಹಾಗೂ ಸಂತ ಲಾರೆನ್ನರ ಅಧಿಕೃತ ಪುಣ್ಯಕ್ಷೇತ್ರ ಉದ್ಘಾಟನೆ ಹಾಗೂ ಆಶೀರ್ವಚನ ಬಳಿಕ ಬಲಿಪೂಜೆ ಈ ತ್ರಿವಳಿ ಸಂಭ್ರಮಗಳು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ, ವಿಶ್ರಾಂತ ಬಿಷಪ್ ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ ಹಾಗೂ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಇವರ ಮುಂದಾಳತ್ವದಲ್ಲಿ ನೆರವೇರಲಿದೆ“ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಧರ್ಮಗುರು ವಿಲಿಯಂ ಡಿ'ಸೋಜಾ, ಸಂತ ಲಾರೆನ್ಸ್ ಶಾಲೆ ಪ್ರಾಂಶುಪಾಲ ಪೀಟರ್ ಗೊನ್ಸಾಲ್ವಿಸ್, ಉಪಾಧ್ಯಕ್ಷ ಜಾನ್ ಡಿ'ಸಿಲ್ವಾ, ಪ್ರಕಾಶ್ ಪಿಂಟೊ, ಮೇರಿ ಮಿರಾಂದಾ, ಸಂಯೋಜಕಿ ಪ್ರೀತಿ ಡಿ'ಸೋಜ ಮತ್ತಿತರರು ಉಪಸ್ಥಿತರಿದ್ದರು.