ಮ೦ಗಳೂರು: ಮೆಸ್ಕಾಂ ಅತ್ತಾವರ ಉಪವಿಭಾಗ ಕಚೇರಿಯಲ್ಲಿ ನ. 14 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ, ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 0824-2421833.