ಪುತ್ತೂರು :ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಪುತ್ತೂರು ಮತ್ತು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಕಾರದೊಂದಿಗೆ ಇರ್ದೆ- ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಜಿಲ್ಲಾ ಮಟ್ಟದ ಸಹಕಾರ ಸಪ್ತಾಹವನ್ನು ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಪರಸ್ಪರ ಸಹಕಾರ ಮನೋಭಾವದೊಂದಿಗೆ ಆರ್ಥಿಕ, ಸಾಮಾಜಿಕ ಸ್ವಾವಲಂಬಿ ಚಿಂತನೆಯಿಂದ ರೂಪುಗೊಂಡ ಸಹಕಾರಿ ರಂಗದ ಬೆಳವಣಿಗೆಯಲ್ಲಿ ಹಿರಿಯ ನೇತಾರರ ಕೊಡುಗೆ ಅಪಾರ. ಪಂಚಾಯತ್ ವ್ಯವಸ್ಥೆಗಳು ಕೂಡ ಸಹಕಾರ ಕ್ಷೇತ್ರದಲ್ಲಿ ಕೈಜೋಡಿಸಿದಾಗ ಸಹಕಾರಿ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಿದೆ ಎಂದು ಹೇಳಿದರು.
ಸಹಕಾರಿ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಬೇಕಾದರೆ ಮಹಿಳೆಯರು ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಹೊಸ ಹೊಸ ಅನ್ವೇಷಣೆಗಳು ಬರಬೇಕು ಜೊತೆಗೆ ಪಾರದರ್ಶಕವಾದ ದೃಢ ಆಡಳಿತ ಇರಬೇಕು. ಒಂದು ದೇಶದ, ಜಗತ್ತಿನ ವ್ಯವಸ್ಥೆಯಲ್ಲಿ ಅದ್ಭುತವಾದಂತಹ ಅಭಿವೃದ್ಧಿಯನ್ನು ಕಾಣಬೇಕಾದರೆ ಪ್ರತಿ ಸಮುದಾಯದ ಪಾತ್ರ ಅಗತ್ಯ ಎಂದರು. ಕೃಷಿಕ ರೈತರ ಸಹಕಾರಿ ಮನೋಧರ್ಮದ ಸಾಧನೆಯ ಕಾರಣಕ್ಕೆ ಅವಿಭಜಿತ ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇವತ್ತು ರಾಜ್ಯದಲ್ಲಿ ಮೊದಲ ಸ್ಥಾನ ಗಳಿಸಿದೆ. ಶಿಕ್ಷಣ ಪಡೆದಂತಹ ಯುವಶಕ್ತಿ ವಿಜ್ಞಾನದ ತಾಂತ್ರಿಕ ಮನಸ್ಸಿನೊಂದಿಗೆ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಉದ್ಯೋಗವನ್ನು ಸೃಷ್ಟಿಸಬೇಕು. ಈ ಮೂಲಕ ಆರ್ಥಿಕವಾಗಿ ಸಬಲೀಕರಣಗೊಳ್ಳುವ ಅವಕಾಶಗಳು ಆಗಬೇಕು ಎಂದರು.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಗೊಟ್ಟು ಮಾತನಾಡಿ, ದ.ಕ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರು ತಾಲೂಕಿನಲ್ಲಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಘಾಟನೆಗೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ನಮ್ಮೂರಿನ ಜಾತ್ರೆಯನ್ನು ಯಾವ ರೀತಿಯಲ್ಲಿ ಮಾಡುತ್ತೇವೋ ಅದೇ ರೀತಿ ನಮ್ಮ ಕೃಷಿ ಪತ್ತಿನ ಸಹಕಾರ ಸಂಘದ ಶಾಖೆಗಳನ್ನು ಶುದ್ಧಗೊಳಿಸಿ, ಆ ಮೂಲಕ ಧ್ವಜಾರೋಹಣ ಮಾಡಿ ಆಚರಿಸಲಾಗುತ್ತದೆ. ಸಹಕಾರಿಗಳು ಸೇರಿಕೊಂಡು ಮಾಡುವ ಅಭೂತಪೂರ್ವ ಕಾರ್ಯಕ್ರಮ ಇದಾಗಿದೆ. ಜವಾಹರಲಾಲ್ ನೆಹರೂ ಅವರ ಜನ್ಮದಿನದ ಅಂಗವಾಗಿ 7 ದಿವಸ ಸಹಕಾರ ಸಪ್ತಾಹವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ವಿಶೇಷವಾಗಿ 71ನೇ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹವನ್ನು ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಯೋಜನೆ ಮಾಡಿದೆ.
ಸಹಕಾರಿ ಸಂಘಗಳಲ್ಲಿ ಸಿಬ್ಬಂದಿ ವರ್ಗ ನಗುಮೊಗದಿಂದ ಗ್ರಾಹಕರಿಗೆ ಸೇವೆ ನೀಡುತ್ತಿದೆ. ಕೃಷಿಕರಿಗೆ ರೂ.50ಲಕ್ಷದವರೆಗೆ ಸಾಲವನ್ನು ಸಹಕಾರಿ ಸಂಘ ನೀಡುತ್ತದೆ ಹೊರತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೀಡುವುದಿಲ್ಲ. ಸಾಲ ನೀಡುವ ಸಂದರ್ಭದಲ್ಲಿ ಗ್ರಾಹಕರನ್ನು ಯಾವುದೇ ರೀತಿಯಲ್ಲಿ ಸಹಕಾರ ಸಂಘಗಳು ಸತಾಯಿಸುವುದಿಲ್ಲ ಎಂದು ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಮೂರ್ತಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯಕಾರ್ಯನಿರ್ವಹಣಾಕಾರಿ ಚಂದ್ರಶೇಖರ್, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೆಂಕಟ್ರಮಣ ಕೆ.ಎಸ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಗಿರೀಜಾ ಕೆ, ಕೆದಂಬಾಡಿ- ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಧರ ರಾವ್ ಬೊಳಿಕಳ, ಮುಖ್ಯಕಾರ್ಯನಿರ್ವಹಣಾಧಿಕಾರಿ ವಿನಯಕುಮಾರ್ ರೈ ದೇರ್ಲ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಮಧುಕರ ಎಚ್, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಸಿ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಹರೀಶ್ ಕುಮಾರ್, ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ತೋಯಜಾಕ್ಷ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪುಷ್ಪಾ, ಹೊಸ್ಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ
ಹೊಸ್ಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಚಂದ್ರ ರೈ ಕುಂಟೋಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೋಮಸುಂದರ ಶೆಟ್ಟಿ, ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗುಂಡ್ಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪುನೀತ್ ಕುಮಾರ್ ಕೊಪ್ಪಡ್ಕ, ಬನ್ನೂರು ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಧಾ ಬಿ.ರೈ, ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಗೌಡ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೋಹರ್‌ಪ್ರಕಾಶ್,ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ಜಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಮೆಶ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾಕರ ಕೆ.ಎಮ್, ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಭಾಸ್ಕರ ಗೌಡ ಇಚ್ಚಂಪಾಡಿ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ.ಪ್ರಸಾದ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶೋಭಾ, ಏನೆಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡ್, ಕುಂಬ್ರ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ಆರ್.ಸಿ ಅವರಿಗೆ ಸಹಕಾರಿ ಶಾಲು ಹೊದಿಸಿ ಅಭಿನಂದಿಸಲಾಯಿತು. ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ವಂದಿಸಿದರು.