image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಮ್ಮ ಪ್ರತಿಭೆಯನ್ನು ಸಮಾಜದ ಒಳಿತಿಗೆ ಬಳಸಿದಾಗ ಮಾನವ ಜನಾಂಗದ ಸರ್ವಾಂಗೀಣ ಅಭಿವೃದ್ಧಿಯಾಗುತ್ತದೆ- ಡೈರೆಕ್ಟರ್ ಜನರಲ್ ಡಾ.ಆರ್ತಿ ಸರಿನ್

ನಮ್ಮ ಪ್ರತಿಭೆಯನ್ನು ಸಮಾಜದ ಒಳಿತಿಗೆ ಬಳಸಿದಾಗ ಮಾನವ ಜನಾಂಗದ ಸರ್ವಾಂಗೀಣ ಅಭಿವೃದ್ಧಿಯಾಗುತ್ತದೆ- ಡೈರೆಕ್ಟರ್ ಜನರಲ್ ಡಾ.ಆರ್ತಿ ಸರಿನ್

ಮಂಗಳೂರು: "ನಮ್ಮ ಪ್ರತಿಭೆಯನ್ನು ಸಮಾಜದ ಒಳಿತಿಗೆ ಬಳಸಿದಾಗ ಮಾನವ ಜನಾಂಗದ ಸರ್ವಾಂಗೀಣ ಅಭಿವೃದ್ಧಿಯಾಗುತ್ತದೆ. ಅದು ಶಿಕ್ಷಣದ ಪ್ರಮುಖ ಆಶಯಗಳಲ್ಲಿ ಒಂದಾಗಿದೆ ಎಂದು ಸೇನಾಪಡೆಗಳ ವೈದ್ಯಕೀಯ ಸೇವೆಗಳ ಡೈರೆಕ್ಟರ್ ಜನರಲ್ ಡಾ.ಆರ್ತಿ ಸರಿನ್ ಹೇಳಿದರು. ಅವರು, ದೇರಳಕಟ್ಟೆ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನ ನಿಟ್ಟೆ ಗೌಂಡ್ಸ್‌ನಲ್ಲಿ ಶನಿವಾರ ನಡೆದ ನಿಟ್ಟೆ ವಿಶ್ವವಿದ್ಯಾಲಯದ 14ನೇ ದಿ ಘಟಿಕೋತ್ಸವ ಸಮಾರಂಭದಲ್ಲಿ 5 ಘಟಿಕೋತ್ಸವ ಸಂದೇಶ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. 

ಈ ಸಮಾರಂಭದಲ್ಲಿ ಒಟ್ಟು 1,052 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಿತು., ಶೈಕ್ಷಣಿಕ ಶ್ರೇಷ್ಠತೆಗೆ  ವಿಶ್ವವಿದ್ಯಾಲಯದ ವತಿಯಿಂದ 11 ನಿಟ್ಟೆ ವಿಶ್ವವಿದ್ಯಾಲಯ ಚಿನ್ನದ ಪದಕ ಮತ್ತು 11 ದತ್ತಿ ಚಿನ್ನದ ಪದಕ  ಹಾಗೂ 72 ಮೆರಿಟ್ ಪ್ರಮಾಣಪತ್ರಗಳ ಪ್ರಶಸ್ತಿಗಳನ್ನು ನೀಡಲಾಯಿತು. ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಶೈಕ್ಷಣಿಕ ಸಹ ಕುಲಾಧಿಪತಿ ಪ್ರೊ.ಡಾ.ಎಂ. ಶಾಂತಾರಾಮ್ ಶೆಟ್ಟಿ ಆಡಳಿತ ಸಹ ಕುಲಾಧಿಪತಿ ವಿಶಾಲ್ ಹೆಗ್ಡೆ, ಕುಲಸಚಿವ ಪ್ರೊ.ಡಾ.ಹರ್ಷ ಹಾಲಹಳ್ಳಿ, ಪರೀಕ್ಷಾ ನಿಯಂತ್ರಕ ಪ್ರೊ.ಡಾ.ಪ್ರಸಾದ್ ಬಿ.ಶೆಟ್ಟಿ ವಿಶ್ವವಿದ್ಯಾಲಯದ ವಿವಿಧ ಕಾಲೇಜುಗಳ ಮುಖ್ಯಸ್ಥರು ಮತ್ತು ಕಾರ್ಯಕಾರಿ ಮಂಡಳಿ ಹಾಗೂ ಶೈಕ್ಷಣಿಕ ಸಮಿತಿ ದ ಸದಸ್ಯರು, ಸಹ ಕುಲಾಧಿಪತಿ ಭಾಗವಹಿಸಿದ್ದರು.ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ  ಪ್ರೊ.ಡಾ.ಎಂ.ಎಸ್.ಮೂಡಿತ್ತಾಯ ಸ್ವಾಗತಿಸಿದರು.

Category
ಕರಾವಳಿ ತರಂಗಿಣಿ